ADVERTISEMENT

ಒಬಿಸಿ ಮೀಸಲಾತಿ: ಸುಪ್ರೀಂ ಕೋರ್ಟ್ ಮೊರೆ ಹೋದ ಉತ್ತರಪ್ರದೇಶ ಸರ್ಕಾರ

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕರಡು ಅಧಿಸೂಚನೆ ರದ್ದು

ಪಿಟಿಐ
Published 29 ಡಿಸೆಂಬರ್ 2022, 14:55 IST
Last Updated 29 ಡಿಸೆಂಬರ್ 2022, 14:55 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್    

ನವದೆಹಲಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿ ಹೊರಡಿಸಿದ್ದ ಕರಡು ಅಧಿಸೂಚನೆಯನ್ನು ರದ್ದುಗೊಳಿಸಿರುವ ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠದ ಆದೇಶವನ್ನು ಪ್ರಶ್ನಿಸಿ ಉತ್ತರಪ್ರದೇಶ ಸರ್ಕಾರವು ಗುರುವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡದೆ ಚುನಾವಣೆ ನಡೆಸುವಂತೆಯೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳೆಯರನ್ನು ಹೊರತುಪಡಿಸಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ನೀಡಿ ಡಿಸೆಂಬರ್ 5ರಂದು ಹೊರಡಿಸಿರುವ ಕರಡು ಅಧಿಸೂಚನೆಯನ್ನು ಹೈಕೋರ್ಟ್‌ ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಮೇಲ್ಮನವಿಯಲ್ಲಿ ಹೇಳಿದೆ.

ADVERTISEMENT

ಇತರ ಹಿಂದುಳಿದ ವರ್ಗಗಳು ಸಾಂವಿಧಾನಿಕವಾಗಿ ಸಂರಕ್ಷಿತ ವಿಭಾಗವಾಗಿದ್ದು, ಕರಡು ಅಧಿಸೂಚನೆಯನ್ನು ರದ್ದುಪಡಿಸುವಲ್ಲಿ ತಪ್ಪಾಗಿದೆ ಎಂದು ಸರ್ಕಾರದ ಪರ ವಕೀಲರು ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.