ADVERTISEMENT

ಉ. ಪ್ರದೇಶ: 50 ಹಸುಗಳ ಜೀವಂತ ಸಮಾಧಿ ಆರೋಪ: ಅಧಿಕಾರಿಯ ಅಮಾನತು

ಪಿಟಿಐ
Published 9 ಡಿಸೆಂಬರ್ 2021, 14:42 IST
Last Updated 9 ಡಿಸೆಂಬರ್ 2021, 14:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಾಂದಾ: ಉತ್ತರ ಪ್ರದೇಶದ ನರೈನಿ ಪ್ರದೇಶದಲ್ಲಿರುವ ಗೋಶಾಲೆಯಲ್ಲಿ 50 ಹಸುಗಳು ಮತ್ತು ಇತರ ಜಾನುವಾರುಗಳನ್ನು ಜೀವಂತ ಸಮಾಧಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಅಲ್ಲಿನ ಸರ್ಕಾರವು ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ.

ನರೈನಿ ನಗರ ಪಂಚಾಯಿತಿಕಾರ್ಯನಿರ್ವಾಹಕ ಅಧಿಕಾರಿ ಅಮರ್ ಬಹದ್ದೂರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಈ ಮೊದಲು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಅಭಿವೃದ್ಧಿ ಅಧಿಕಾರಿ ವೇದ್ ಪ್ರಕಾಶ್ ಮೌರ್ಯ ಅವರು ಜಿಲ್ಲಾಧಿಕಾರಿಗೆ ತನಿಖಾ ವರದಿಯನ್ನು ಸಲ್ಲಿಸಿದ್ದರು.

ADVERTISEMENT

ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಗೋಶಾಲೆಯಲ್ಲಿನ 50 ಹಸುಗಳು ಮತ್ತು ಜಾನುವಾರುಗಳನ್ನು ಜೀವಂತ ಸಮಾಧಿ ಮಾಡಲಾಗಿದೆ ಎಂದು ನರೈನಿ ಕ್ಷೇತ್ರದ ಬಿಜೆಪಿ ಶಾಸಕ ರಾಜ್‌ಕರನ್ ಕಬೀರ್ ಆರೋಪಿಸಿದ್ದರು. ಅಲ್ಲದೆ ಕಾರ್ಯನಿರ್ವಾಹಕ ಅಧಿಕಾರಿಯನ್ನು ಬಲಿಪಶು ಮಾಡಲಾಗಿದ್ದು, ಹಗರಣದಲ್ಲಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಶಾಮೀಲಾಗಿದ್ದಾರೆ ಎಂದು ಹೇಳಿದ್ದಾರೆ.

ನರೈನಿನಲ್ಲಿರುವ ತಾತ್ಕಾಲಿಕ ಗೋಶಾಲೆಯಿಂದ 134 ಹಸುಗಳು ಮತ್ತು ಜಾನುವಾರುಗಳನ್ನು ಇತರೆ ನಾಲ್ಕು ತಾತ್ಕಾಲಿಕ ಗೋಶಾಲೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನುರಾಗ್ ಪಟೇಲ್ ಶನಿವಾರ ಹೇಳಿದ್ದರು. ಸೋಮವಾರ ಈ ಪ್ರಾಣಿಗಳನ್ನು ಮಧ್ಯಪ್ರದೇಶದ ಕಾಡಿನಲ್ಲಿ ಜೀವಂತ ಸಮಾಧಿ ಮಾಡಿರುವ ಕುರಿತು ಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.