ಲಖನೌ: ಉತ್ತರ ಪ್ರದೇಶದಲ್ಲಿ ಕಾನೂನುಬಾಹಿರವಾಗಿ ಘೋಷಿಸಲ್ಪಟ್ಟ ವಕ್ಫ್ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಸಂಸತ್‌ನಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2025ಕ್ಕೆ ಅಂಗೀಕಾರ ದೊರೆತ ಬೆನ್ನಿಗೆ, ಅಕ್ರಮ ಆಸ್ತಿಗಳನ್ನು ಗುರುತಿಸಿ, ಅವನ್ನು ವಶಪಡಿಸಿಕೊಳ್ಳುವ ಅಭಿಯಾನ ಆರಂಭಿಸುವಂತೆ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ ಎನ್ನಲಾಗಿದೆ.
ಕಂದಾಯ ಇಲಾಖೆ ದಾಖಲೆ ಪ್ರಕಾರ, ರಾಜ್ಯದಾದ್ಯಂತ 2,963 ವಕ್ಫ್ ಆಸ್ತಿಗಳಿವೆ. ಆದರೆ, ದಾಖಲಿಸದ ಆಸ್ತಿಗಳ ಸಂಖ್ಯೆ 1.30 ಲಕ್ಷಕ್ಕಿಂತಲೂ ಹೆಚ್ಚಿದೆ. ‘ಈ ಹೆಚ್ಚಿನ ಸಂಖ್ಯೆಯ ಆಸ್ತಿಗಳನ್ನು ಅಕ್ರಮ ಎಂದು ಘೋಷಿಸುವ ಸಾಧ್ಯತೆಯಿದೆ’ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಗ್ರಾಮ ಸಮುದಾಯ, ಕೆರೆ–ಕಟ್ಟೆ ಹಾಗೂ ಇತರ ಜಮೀನನ್ನು ರಾಜ್ಯದಲ್ಲಿ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಆದರೆ ದಾನ ನೀಡಿದ ಭೂಮಿಯನ್ನು ಮಾತ್ರ ವಕ್ಫ್ ಆಸ್ತಿ ಎಂದು ಘೋಷಿಸಬಹುದು ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಎಷ್ಟು ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ ಎಂಬುದನ್ನು ಪತ್ತೆ ಹಚ್ಚಲು ಕಂದಾಯ ಇಲಾಖೆಯು ಸಮೀಕ್ಷೆ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.