ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ
ನವದೆಹಲಿ: ಉತ್ತರ ಪ್ರದೇಶದ ಕುಂದಾ ಕ್ಷೇತ್ರದ ಶಾಸಕ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ವಿರುದ್ಧ ಅವರ ಪತ್ನಿ ಭನ್ವಿ ಸಿಂಗ್ ನೀಡಿದ ದೂರಿನ ಮೇರೆಗೆ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಮಾರ್ಚ್ 7 ರಂದು ದೆಹಲಿಯ ಸಫ್ದರ್ಜಂಗ್ ಎನ್ಕ್ಲೇವ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಭನ್ವಿ ರಘುರಾಜ್ ಹಲವು ವರ್ಷಗಳಿಂದ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಪತ್ನಿ ದೂರಿನಲ್ಲಿ ಹೇಳಿದ್ದಾರೆ.
ದಂಪತಿಗ ಹಲವಾರು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎನ್ನುವುದು ಪೊಲೀಸರು ನೀಡಿದ ಮಾಹಿತಿ.
ಅತ್ತೆ ಸೇರಿದಂತೆ ಗಂಡನ ಮನೆಯವರೂ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.