ಬದೌನ್, ಉತ್ತರ ಪ್ರದೇಶ: ನಾಯಿಯೊಂದಕ್ಕೆ ಚಿತ್ರಹಿಂಸೆ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ಬಳಿಕ ಸಂಬಂಧಿಸಿದ ವ್ಯಕ್ತಿ ವಿರುದ್ಧ ಕ್ರೌರ್ಯದ ಪ್ರಕರಣ ದಾಖಲಿಸಲಾಗಿದೆ.
ಈ ಘಟನೆಯು ಕಳೆದೊಂದು ತಿಂಗಳ ಹಿಂದೆ ಸಹಸ್ವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 2 ದಿನಗಳ ಹಿಂದಷ್ಟೇ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಈ ವಿಡಿಯೊದಲ್ಲಿ ವ್ಯಕ್ತಿಯು ನಾಯಿಯ ಬಾಲವನ್ನು ಹಿಡಿದು ಎತ್ತಿ ಬಿಸಾಕುತ್ತಿರುವುದನ್ನು ಕಾಣಬಹುದು. ಈ ವಿಡಿಯೊವನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಪ್ರಾಣಿ ದಯಾ ಸಂಘದ ಕಾರ್ಯಕರ್ತರೊಬ್ಬರು, ಕ್ರಮಕ್ಕೆ ಒತ್ತಾಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.