ADVERTISEMENT

ಉತ್ತರಪ್ರದೇಶ: 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದವನಿಗೆ ಜೀವಾವಧಿ ಶಿಕ್ಷೆ

ಪಿಟಿಐ
Published 1 ಮಾರ್ಚ್ 2024, 14:59 IST
Last Updated 1 ಮಾರ್ಚ್ 2024, 14:59 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಥುರಾ: ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉತ್ತರ ಪ್ರದೇಶದ ನ್ಯಾಯಾಲಯ ಆದೇಶಿಸಿದೆ.

‘ಒಂಭತ್ತು ತಿಂಗಳ ಹಿಂದೆ ನಡೆದ ಈ ಘಟನೆ ಕುರಿತು ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ರಾಮ್‌ ಕಿಶೋರ್ ನೆಹ್ನಾ (ಲೋಕೇಶ್) ಎಂಬಾತನೇ ಶಿಕ್ಷೆಗೆ ಒಳಗಾದ ಅಪರಾಧಿ’ ಎಂದು ಜಿಲ್ಲಾ ವಿಶೇಷ ಸರ್ಕಾರಿ ಅಭಿಯೋಜಕಿ ಅಲ್ಕಾ ಉಪಮನ್ಯು ತಿಳಿಸಿದ್ದಾರೆ.

ADVERTISEMENT

‘ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸುವುದರ ಜತೆಗೆ ₹30 ಸಾವಿರ ದಂಡವನ್ನೂ ನ್ಯಾಯಾಲಯ ವಿಧಿಸಿದೆ. ಇದೇ ಪ್ರಕರಣದಲ್ಲಿ ಇನ್ನಿತರ ಅಪರಾಧಿಗಳು ಬಾಲಕರಾಗಿದ್ದು, ಅವರ ವಿಚಾರಣೆಯು ಬಾಲಾಪರಾಧ ನ್ಯಾಯಾಲಯದಲ್ಲಿ ನಡೆಯುತ್ತಿದೆ’ ಎಂದು ಹೇಳಿದ್ದಾರೆ.

‘ಲೈಂಗಿಕ ದೌರ್ಜನ್ಯ ಎಸಗಿದ ನೆಹ್ನಾ, ವಿಷಯವನ್ನು ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆಯೊಡ್ಡಿದ್ದ. ಘಟನೆ ಕುರಿತು ವಿಚಾರಿಸಲು ಹೋದ ಸಂತ್ರಸ್ತೆಯ ತಂದೆಯನ್ನೂ ಕೊಲೆ ಮಾಡುವುದಾಗಿ ಈತ ಹೆದರಿಸಿದ್ದ. ಈ ಕುರಿತು ಸಂತ್ರಸ್ತೆಯ ಕುಟುಂಬದವರು ದೂರು ದಾಖಲಿಸಿದ್ದರು. ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನೆಹ್ನಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ ಶಿಕ್ಷೆಗೆ ಪ್ರಕಟಿಸಿದೆ’ ಎಂದು ಅಲ್ಕಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.