ಪ್ರಾತಿನಿಧಿಕ ಚಿತ್ರ
ಬಲರಾಮಪುರ: ಮಾನಸಿಕ ಅಸ್ವಸ್ಥ ತಾಯಿಯೊಬ್ಬಳು ತನ್ನ 15 ತಿಂಗಳ ಮಗುವಿನ ಕತ್ತು ಸೀಳಿ ಕೊಲೆಗೈದ ಘಟನೆ ಉತ್ತರ ಪ್ರದೇಶದ ಬಲರಾಮಪುರದಲ್ಲಿ ನಡೆದಿದೆ.
ನಾದಿಯಾ (30) ಎನ್ನುವ ಮಹಿಳೆ ಮಗುವಿನ ಕತ್ತು ಸೀಳಿದ್ದಳು. ಬಳಿಕ ತನ್ನ ಕತ್ತನ್ನೂ ಸೀಳಿಕೊಂಡಿದ್ದಾಳೆ. ಅಷ್ಟರಲ್ಲಿ ಕುಟುಂಬಸ್ಥರು ಗಮನಕ್ಕೆ ಬಂದ ಹಿನ್ನೆಲೆ ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾದಿಯಾ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆಕೆ ಮಾನಸಿಕ ಅಸ್ವಸ್ಥೆಯಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮೃತಪಟ್ಟ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.