ADVERTISEMENT

ಉತ್ತರಪ್ರದೇಶ: ಸಚಿವೆ ಕಮಲಾ ರಾಣಿ ವರುಣ್‌ ಕೊರೊನಾ ಸೋಂಕಿನಿಂದ ಸಾವು

ಏಜೆನ್ಸೀಸ್
Published 2 ಆಗಸ್ಟ್ 2020, 6:29 IST
Last Updated 2 ಆಗಸ್ಟ್ 2020, 6:29 IST
ಕಮಲಾ ರಾಣಿ ವರುಣ್
ಕಮಲಾ ರಾಣಿ ವರುಣ್   

ಲಖನೌ:ಉತ್ತರ ಪ್ರದೇಶದಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ ಬಳಲುತ್ತಿದ್ದ ಸಚಿವೆ ಕಮಲಾ ರಾಣಿ ವರುಣ್‌ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಇಲ್ಲಿನ ಸಂಜಯ ಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 9.30ಕ್ಕೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಕಮಲಾ ರಾಣಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿ ತಾಂತ್ರಿಕ ಶಿಕ್ಷಣ ಸಚಿವೆಯಾಗಿದ್ದರು.
ಜುಲೈ 18ರಂದು ಕೊರೊನಾ ವೈರಸ್‌ ಪಾಸಿಟಿವ್‌ ದೃಢಪಟ್ಟಿತ್ತು. ನಂತರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ADVERTISEMENT

ಸಚಿವೆ ಕಮಲಾ ರಾಣಿ ವರುಣ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಕಮಲಾ ರಾಣಿ ರಾಜಕಾರಣಿ ಮಾತ್ರವಲ್ಲದೇ ಸಮಾಜ ಸೇವಕಿಯಾಗಿದ್ದರು. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಯೋಗಿ ಆದಿತ್ಯಾನಾಥ್ ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.