ADVERTISEMENT

ಮತಾಂತರ, ಮದುವೆಗೆ ಯುವತಿ ನಿರಾಕರಣೆ: ಮಹಡಿ ಮೇಲಿಂದ ತಳ್ಳಿ ಹತ್ಯೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 14:35 IST
Last Updated 16 ನವೆಂಬರ್ 2022, 14:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: 18 ವರ್ಷದ ಯುವತಿಯೊಬ್ಬಳು ಮತಾಂತರ ಹಾಗೂ ಮದುವೆಗೆ ನಿರಾಕರಿಸಿದಕ್ಕೆ ಪಕ್ಕದ ಮನೆಯ ಸೂಫಿಯಾನ್‌ ಎಂಬ ಯುವಕ ಆಕೆಯನ್ನುಮನೆಯ ನಾಲ್ಕನೇ ಮಹಡಿಯಿಂದ ತಳ್ಳಿ ಹತ್ಯೆ ಮಾಡಿರುವ ಘಟನೆ ದುಬಗ್ಗಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.

ಯುವತಿಯು ದುಬಗ್ಗಾ ಪ್ರದೇಶದಲ್ಲಿ ವಾಸವಿದ್ದು, ಆರೋಪಿ ಪಕ್ಕದ ಮನೆಯವನೇ ಆಗಿದ್ದಾನೆ. ಯುವತಿಯು ಮದುವೆ ಹಾಗೂ ಮತಾಂತರಕ್ಕೆ ಸಂಬಂಧಿಸಿದಂತೆ ಆರೋಪಿಯೊಂದಿಗೆ ಜಗಳ ಮಾಡಿಕೊಂಡಿದ್ದಳು. ನಂತರಯುವತಿಯು ತನ್ನ ತಾಯಿ ಮತ್ತು ಸಹೋದರನೊಂದಿಗೆ ಆರೋಪಿ ಮನೆಗೆ ತೆರಳಿ ಅವರ ಪೋಷಕರಿಗೆ ಅವನ ವರ್ತನೆಯ ಬಗ್ಗೆ ದೂರು ನೀಡಿದ್ದಳು. ಆ ಸಂದರ್ಭದಲ್ಲಿ ಆಕೆಯನ್ನು ಮನೆ ಮೇಲಿಂದ ತಳ್ಳಿದ್ದಾನೆ.ಈ ಘಟನೆ ಮಂಗಳವಾರ ರಾತ್ರಿ ನಡೆದಿದೆ ಎಂದುಪೊಲೀಸ್‌ ಮೂಲಗಳು ತಿಳಿಸಿವೆ.

ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದ ಸಾವನ್ನಪ್ಪಿದ್ದಾಳೆಂದು ಮೂಲಗಳು ತಿಳಿಸಿವೆ.

ADVERTISEMENT

ಆರೋಪಿಯುವತಿಯನ್ನು ಮತಾಂತರ ಹಾಗೂ ಮದುವೆಯಾಗುವಂತೆ ಪೀಡಿಸುತ್ತಿದ್ದ ಎಂದು ಯುವತಿಯ ತಾಯಿ ತಿಳಿಸಿದ್ದಾರೆ.

ಆರೋಪಿ ವಿರುದ್ಧ ದೂರು ದಾಖಲಾಗಿದೆ. ಸೂಫಿಯಾನ್‌ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ನಾಯಕರು ಆರೋಪಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.