ಸಹಾರನ್‌ಪುರ(ಉತ್ತರ ಪ್ರದೇಶ): ಜಿಲ್ಲೆಯ ನನೌತ ಪ್ರದೇಶದಲ್ಲಿ ಮೊಹರಂ ಮೆರವಣಿಗೆಯ ವೇಳೆ ಶರಬತ್ ಮತ್ತು ಬಿರಿಯಾನಿ ಸೇವಿಸಿ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, ಸುಮಾರು 70 ಜನರು ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಬಿರಿಯಾನಿ ಮತ್ತು ಶರಬತ್ ಸೇವಿಸಿದ ನಂತರ ಸುಮಾರು 70 ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಡಿಸಿ ಮನೀಶ್ ಬನ್ಸಾಲ್ ತಿಳಿಸಿದ್ದಾರೆ. ಅವರನ್ನು ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಾಗಲೇ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ಶಬಿ ಹೈದರ್(60) ಎಂದು ಗುರುತಿಸಲಾಗಿದೆ.
ಅಸ್ವಸ್ಥತೆಯು ಆಹಾರ ಅಥವಾ ಪಾನೀಯ ಯಾವುದರಿಂದ ಆಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸಹಾರನ್‌ಪುರದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಹೇಳಿದ್ದಾರೆ.
ಆಹಾರ ಮತ್ತು ಪಾನೀಯದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಡಿಸಿ ಬನ್ಸಾಲ್ ಹೇಳಿದ್ದಾರೆ.
ಸದ್ಯ, 54 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 15 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.