ADVERTISEMENT

ಯುಪಿ | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪಿಟಿಐ
Published 22 ಜೂನ್ 2025, 9:24 IST
Last Updated 22 ಜೂನ್ 2025, 9:24 IST
ಪ್ರಶ್ನೆ ಪತ್ರಿಕೆ ಸೋರಿಕೆ
ಪ್ರಶ್ನೆ ಪತ್ರಿಕೆ ಸೋರಿಕೆ   

ಸಾಂದರ್ಭಿಕ ಚಿತ್ರ 

ಮುಜಫರ್‌ನಗರ: ಉತ್ತರ ಪ್ರದೇಶ ಪೊಲೀಸ್‌ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಶಾಮ್ಲಿ ಜಿಲ್ಲೆಯ ನಿವಾಸಿ ಅಜಯ್‌ ಎಂದು ಗುರುತಿಸಲಾಗಿದೆ.

ADVERTISEMENT

ಆರೋಪಿ ತಲೆಗೆ ₹10,000 ಇನಾಮು ಘೋಷಿಸಲಾಗಿತ್ತು. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಬನ್ಸಾಲ್ ತಿಳಿಸಿದ್ದಾರೆ.

2024ರ ಫೆಬ್ರುವರಿ 17 ಹಾಗೂ 18ರಂದು ನಡೆದ ಪರೀಕ್ಷೆಗೆ 48 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಸರ್ಕಾರವು ಫೆ.24ರಂದು ಪರೀಕ್ಷೆಯನ್ನು ರದ್ದುಗೊಳಿಸಿರುವುದಷ್ಟೇ ಅಲ್ಲದೆ, ಆರು ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಆದೇಶಿಸಿತ್ತು.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ಮೂಲಕ ತನಿಖೆ ನಡೆಸಲಾಗುವುದು. ಜತೆಗೆ, ಅರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.