ADVERTISEMENT

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಅಖಿಲೇಶ್ ಯಾದವ್ ವಿರುದ್ಧ ಪ್ರಕರಣ

ಪಿಟಿಐ
Published 21 ಫೆಬ್ರುವರಿ 2022, 15:48 IST
Last Updated 21 ಫೆಬ್ರುವರಿ 2022, 15:48 IST
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್   

ಇಟವಾ: ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

ಚುನಾವಣೆ ನಡೆಯುತ್ತಿದ್ದಾಗ ಮತದಾನ ಕೇಂದ್ರದ ಒಳಗೆ ಮಾಧ್ಯಮದವರ ಬಳಿ ಮಾತನಾಡಿದ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಸೈಫಾಯಿಯ ಅಭಿನವ್ ಶಾಲೆಯಲ್ಲಿ ಮತದಾನ ನಡೆಯುತ್ತಿದ್ದಾಗ ಯಾದವ್ ಅವರು ವರದಿಗಾರರನ್ನು ಉದ್ದೇಶಿಸಿ ಮಾತನಾಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೆಯಾಗಿತ್ತು ಎಂದು ಇಟವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಶ್ರುತಿ ಸಿಂಗ್ ಹೇಳಿದ್ದಾರೆ.

ADVERTISEMENT

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆ ನಡೆಸುವಂತೆ ಸೈಫಾಯಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಮತ್ತು ಸರ್ಕಲ್ ಆಫೀಸರ್‌ಗೆ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.