ADVERTISEMENT

ವಿಕಾಸ್‌ ದುಬೆ ಎನ್‌ಕೌಂಟರ್‌: ಸರ್ಕಾರಕ್ಕೆ ತನಿಖಾ ವರದಿ ಸಲ್ಲಿದ ಎಸ್‌ಐಟಿ

ಪಿಟಿಐ
Published 5 ನವೆಂಬರ್ 2020, 9:00 IST
Last Updated 5 ನವೆಂಬರ್ 2020, 9:00 IST
ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದ ರೌಡಿ ವಿಕಾಸ್ ದುಬೆ
ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದ ರೌಡಿ ವಿಕಾಸ್ ದುಬೆ   

ಲಖನೌ: ರೌಡಿ ವಿಕಾಸ್‌ ದುಬೆ ಎನ್‌ಕೌಂಟರ್‌ ಪ್ರಕರಣದ ತನಿಖೆ ನಡೆಸಿರುವ ಮೂವರು ಸದಸ್ಯರನ್ನೊಳಗೊಂಡ ಉತ್ತರ ಪ್ರದೇಶದ ವಿಶೇಷ ತನಿಖಾ ತಂಡ (ಎಸ್‌ಐಟಿ), ಈ ಪ್ರಕರಣದಲ್ಲಿ ನಂಟು ಹೊಂದಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ವರದಿ ನೀಡಿದೆ.

ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ ಸಿದ್ದಪಡಿಸಿರುವ 3500 ಪುಟಗಳ ತನಿಖಾ ವರದಿಯನ್ನು ಬುಧವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸಲ್ಲಿಸಿದೆ.

‘ಎಸ್‌ಐಟಿ ತಂಡ ವರದಿಯಲ್ಲಿ 36 ಶಿಫಾರಸುಗಳನ್ನು ಮಾಡಿದೆ. ಜತೆಗೆ, ಈ ಪ್ರಕರಣದಲ್ಲಿ ನಂಟು ಹೊಂದಿರುವ 80 ಪೊಲೀಸ್ ಅಧಿಕಾರಿಗಳ ಪಾತ್ರವನ್ನು ವಿವರವಾಗಿ ದಾಖಲಿಸಿದೆ‘ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

‘ವರದಿಯನ್ನು ಪರಿಶೀಲಿಸಿದ ನಂತರ, ಸರ್ಕಾರ ಕ್ರಮ ಕೈಗೊಳ್ಳಲಿದೆ‘ ಎಂದು ಅವರು ತಿಳಿಸಿದ್ದಾರೆ.

ಜುಲೈ 3 ರಂದು ಕಾನ್ಪುರದ ಚೌಬೆಪುರ್ ಪ್ರದೇಶದ ಬಿಕ್ರು ಗ್ರಾಮದಲ್ಲಿ ಗ್ಯಾಂಗ್‌ಸ್ಟರ್‌ ದುಬೆ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರ ಪೈಕಿ ಎಂಟು ಮಂದಿ ಹತರಾಗಿದ್ದರು. ಜುಲೈ 10 ರಂದು ನಡೆದ ಎನ್‌ಕೌಂಟರ್‌ನಲ್ಲಿ ದುಬೆ ಹತನಾದ. ಈ ಪ್ರಕರಣದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ದುಬೆಗೆ ನೆರವಾಗಿದ್ದರು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಸಂಬಂಧ ಎಸ್‌ಐಟಿ ತಂಡ ತನಿಖೆ ನಡೆಸಿ, ವರದಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.