ADVERTISEMENT

ಪ್ರಧಾನಿ ಮೋದಿ ಕುರಿತಂತೆ ಆಕ್ಷೇಪಾರ್ಹ ಪೋಸ್ಟ್: ಮೂವರ ಬಂಧನ

ಪಿಟಿಐ
Published 11 ಮೇ 2025, 11:13 IST
Last Updated 11 ಮೇ 2025, 11:13 IST
<div class="paragraphs"><p>ಬಂಧನ </p></div>

ಬಂಧನ

   

ಸೋನಭದ್ರ(ಉತ್ತರ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ತಿರುಚಿದ ಮತ್ತು ಆಕ್ಷೇಪಾರ್ಹ ಕಂಟೆಂಟ್ ಪೋಸ್ಟ್ ಮಾಡಿದ್ದಕ್ಕಾಗಿ ಉತ್ತರ ಪ್ರದೇಶದ ಸೋನಭದ್ರದಲ್ಲಿ ಪೊಲೀಸರು ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಶಬ್ಬೀರ್ ಅನ್ಸಾರಿ, ಜುಬೈರ್ ಅನ್ಸಾರಿ ಮತ್ತು ಇಝಾರ್ ತಮ್ಮ ಫೇಸ್‌ಬುಕ್ ಖಾತೆಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಶನಿವಾರ, ಅನ್ಪರಾ ಬಜಾರ್ ನಿವಾಸಿ ಬಾಲಗೋಪಾಲ್ ಚೌರಾಸಿಯಾ ಅವರು ದೂರು ದಾಖಲಿಸಿದ್ದರು ಎಂದು ಎಎಸ್‌ಪಿ ಕಾಲು ಸಿಂಗ್ ಹೇಳಿದ್ದಾರೆ.

ADVERTISEMENT

ದೂರುದಾರರ ಪ್ರಕಾರ, ಆರೋಪಿಗಳು ಪಾಕಿಸ್ತಾನಿ ಯೂಟ್ಯೂಬರ್ ಒಬ್ಬರ ಫೇಸ್‌ಬುಕ್ ಕಂಟೆಂಟ್ ಅನ್ನು ಬಳಸಿಕೊಂಡು ಪ್ರಧಾನಿ ಮೋದಿಯವರನ್ನು ತಪ್ಪಾಗಿ ಚಿತ್ರಿಸುವ ತಿರುಚಿದ ಪೋಸ್ಟ್‌ಗಳನ್ನು ರಚಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಪೋಸ್ಟ್‌ಗಳು ಭಾರತ ವಿರೋಧಿ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಆರೋಪಿಗಳು ಶತ್ರು ರಾಷ್ಟ್ರಗಳೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿರುವ ಸಾಧ್ಯತೆ ಇದೆ ಎಂದು ಎಎಸ್‌ಪಿ ಹೇಳಿದ್ದಾರೆ.

ದೂರು ಮತ್ತು ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ಬಿಎನ್‌ಎಸ್‌ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.