ಅಗ್ನಿ ಅವಘಡ
(ಸಾಂದರ್ಭಿಕ ಚಿತ್ರ)
ಮಹಾಕುಂಭ ನಗರ (ಉತ್ತರ ಪ್ರದೇಶ): ಮಹಾಕುಂಭ ಮೇಳದಲ್ಲಿ ಶನಿವಾರ ಬೆಳಿಗ್ಗೆ ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿದ್ದು, ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ವಾರಾಣಸಿಯಿಂದ ಮಹಾಕುಂಭ ಮೇಳಕ್ಕೆ ಬರುತ್ತಿದ್ದ ಕಾರೊಂದಕ್ಕೆ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಹೊತ್ತಿಕೊಂಡಿತು. ಪಕ್ಕದಲ್ಲಿದ್ದ ಇನ್ನೊಂದು ಕಾರಿಗೂ ಬೆಂಕಿ ವ್ಯಾಪಿಸಿತು’ ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ಪ್ರಮೋದ್ ಶರ್ಮ ಹೇಳಿದ್ದಾರೆ.
ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿನಲ್ಲಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.