ADVERTISEMENT

ಹೋಳಿ: ಮಾವನಿಗೆ ಬಣ್ಣ ಹಚ್ಚಿದ್ದಕ್ಕೆ ಗದರಿದ ಅತ್ತೆ; ವಿಷ ಸೇವಿಸಿ ಸೊಸೆ ಆತ್ಮಹತ್ಯೆ

ಪಿಟಿಐ
Published 17 ಮಾರ್ಚ್ 2025, 13:11 IST
Last Updated 17 ಮಾರ್ಚ್ 2025, 13:11 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬಲ್ಲಿಯಾ: ಹೋಳಿ ಆಚರಣೆಯಂದು ಮಾವನಿಗೆ ಬಣ್ಣ ಹಚ್ಚಿದ್ದಕ್ಕೆ ಅತ್ತೆ ಗದರಿದ ಕಾರಣ, ವಿಷ ಸೇವಿಸಿ ಸೊಸೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹತ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿಕಾಲಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ADVERTISEMENT

ಹೋಳಿ ಹಬ್ಬದಂದು ಮಾವನಿಗೆ ಬಣ್ಣ ಹಚ್ಚಿದ ಕಾರಣಕ್ಕೆ ಅತ್ತೆ ಗದರಿದ್ದು, ಗಲಾಟೆಯ ಬಳಿಕ ಧನಾವತಿ ದೇವಿ (30) ಎಂಬವರು ವಿಷ ಸೇವಿಸಿದ್ದಾರೆ. ತಕ್ಷಣ ಆಕೆಯನ್ನು ಕುಟುಂಬ ಸದಸ್ಯರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಿದ್ದಾರೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.