ADVERTISEMENT

ಸಿಎಸ್‌ಸಿಗಳಲ್ಲಿ ಆಧಾರ್‌ ತಿದ್ದುಪಡಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2020, 21:25 IST
Last Updated 27 ಏಪ್ರಿಲ್ 2020, 21:25 IST
   

ನವದೆಹಲಿ: ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (ಸಿಎಸ್‌ಸಿ) ಆಧಾರ್‌ ಕಾರ್ಡ್‌ಗಳಲ್ಲಿ ತಿದ್ದುಪಡಿ ಮಾಡುವ ಸೌಲಭ್ಯವನ್ನು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಕಲ್ಪಿಸಿದೆ.

ಇದರಿಂದ, ಗ್ರಾಮೀಣ ಪ್ರದೇಶದ ಜನತೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ 20ಸಾವಿರ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಈ ಸೌಲಭ್ಯ ದೊರೆಯಲಿದೆ.

ADVERTISEMENT

ಈ ಕೇಂದ್ರಗಳನ್ನು ‘ಬ್ಯಾಂಕಿಂಗ್‌ ಕರೆಸ್ಪಾಂಡೆಂಟ್‌’ ಎಂದು ಪರಿಗಣಿಸಲಾಗುತ್ತಿದೆ. ಈ ಕೇಂದ್ರಗಳಲ್ಲಿ ಜೂನ್‌ನಿಂದ ಕಾರ್ಯನಿರ್ವಹಿಸುವಂತೆ ಯುಐಡಿಎಐ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.