ನವದೆಹಲಿ: ಕೇಂದ್ರದ ಅಧಿಕ ಪ್ರಮಾಣದ ಅನುದಾನ ಒದಗಿಸುವ ನಿಟ್ಟಿನಲ್ಲಿ, ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸುವಂತೆ ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಮುಖ್ಯಮಂತ್ರಿ ಕೋರಿದರು.
ಮೇಕೆದಾಟು ಸಮಾನಾಂತರ ಜಲಾಶಯ ನಿರ್ಮಾಣ ಕುರಿತ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಎದುರು ಇರುವ ಈ ವರದಿಯನ್ನು ಅನುಮೋದಿಸಿ ಯೋಜನೆಗೆ ಆರ್ಥಿಕ ನೆರವು ನೀಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಗೂ ಅಗತ್ಯ ಅನುದಾನ ನೀಡಬೇಕು ಎಂದು ಇದೇ ವೇಳೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಮಹದಾಯಿ ಯೋಜನೆ ಕೈಗೆತ್ತಿಕೊಳ್ಳಲು ಅಗತ್ಯವಿರುವ ಪರಿಸರ ಮತ್ತು ಅರಣ್ಯ ಇಲಾಖೆ ಅನುಮತಿಯನ್ನು ಶೀಘ್ರವೇ ಒದಗಿಸಬೇಕು ಎಂದೂ ಆಗ್ರಹಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.