ADVERTISEMENT

ದೆಹಲಿ: ಯುಪಿಎಸ್‌ಸಿ ಆಕಾಂಕ್ಷಿ ಆತ್ಮಹತ್ಯೆ

ಪಿಟಿಐ
Published 20 ಜುಲೈ 2025, 13:05 IST
Last Updated 20 ಜುಲೈ 2025, 13:05 IST
<div class="paragraphs"><p>ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)</p></div>

ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)

   

ನವದೆಹಲಿ: ಸೆಂಟ್ರಲ್‌ ದೆಹಲಿಯ ಹಳೆ ರಾಜೀಂದರ್‌ ನಗರ ವ್ಯಾಪ್ತಿಯಲ್ಲಿ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷಾ ಆಕಾಂಕ್ಷಿಯೊಬ್ಬರು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಮ್ಮುವಿನ ತರುಣ್‌ ಠಾಕೂರ್‌ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಇಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು ಯುಪಿಎಸ್‌ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ‌ರು. ‘ಸ್ಥಳದಲ್ಲಿ ಮರಣ ಪತ್ರ ಲಭಿಸಿದ್ದು, ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದಿದ್ದಾರೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.