ADVERTISEMENT

ಯುಪಿಎಸ್‌ಸಿ ಅಧ್ಯಕ್ಷರು, ಸದಸ್ಯರು ನಿಷ್ಕಳಂಕಿತರಾಗಿರಬೇಕು: ಸಂಸದೀಯ ಸಮಿತಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 16:24 IST
Last Updated 18 ಮಾರ್ಚ್ 2021, 16:24 IST
ಯುಪಿಎಸ್‌ಸಿ ಲೋಗೊ
ಯುಪಿಎಸ್‌ಸಿ ಲೋಗೊ   

ನವದೆಹಲಿ (ಪಿಟಿಐ): ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷರು ಮತ್ತು ಸದಸ್ಯರಾಗುವವರು ನಿಷ್ಕಳಂಕಿತರು, ಹೆಚ್ಚಿನ ಸಾಮರ್ಥ್ಯವುಳ್ಳವರು, ನಿಖರತೆ ಹೊಂದಿದವರು ಹಾಗೂ ನಿಷ್ಪಕ್ಷಪಾತ ವ್ಯಕ್ತಿಗಳಾಗಿರಬೇಕು ಎಂದು ಸಂಸದೀಯ ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ.

ಯುಪಿಎಸ್‌ಸಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಆಯ್ಕೆ ಮಾಡಲು ಅನುಸರಿಸಿದ ವಿಧಾನವು ನ್ಯಾಯಸಮ್ಮತ, ಪಾರದರ್ಶಕ ಮತ್ತು ವಸ್ತುನಿಷ್ಠವಾಗಿರಬೇಕು. ಇದರಲ್ಲಿ ಸಾಮಾಜಿಕ ನ್ಯಾಯ, ವೈವಿಧ್ಯತೆ ಮತ್ತು ಲಿಂಗ ಸಮಾನತೆಯ ತತ್ವಗಳನ್ನು ಎತ್ತಿಹಿಡಿಯಬೇಕು ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

ಲೋಕ ಸೇವಾ ಆಯೋಗಗಳ ವಿಶ್ವಾಸಾರ್ಹತೆಯು ಅದರ ಸಮರ್ಪಕ ಕಾರ್ಯಚಟುವಟಿಕೆಯಲ್ಲಿ ಜನಸಾಮಾನ್ಯರು ಹೊಂದಿರುವ ನಂಬಿಕೆಯ ಮೇಲೆ ಸ್ಥಾಪಿತಗೊಂಡಿದೆ ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ.

ADVERTISEMENT

2021–22 ಸಾಲಿನ ಅನುದಾನದ ಬೇಡಿಕೆಗೆ ಮಂಗಳವಾರ ಸಂಸತ್ತಿನಲ್ಲಿ ಮಂಡಿಸಲಾದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯದ 106ನೇ ವರದಿಯಲ್ಲಿ ಇದನ್ನು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.