ನವದೆಹಲಿ: ನಾಗರಿಕ ಸೇವಾ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಫೆ.18ರವರೆಗೆ ವಿಸ್ತರಿಸಿದೆ.
ನಾಗರಿಕ ಸೇವೆ ಮತ್ತು ಅರಣ್ಯ ಸೇವಾ ಪರೀಕ್ಷೆಗಳಿಗೆ ಆಕಾಂಕ್ಷಿಗಳು ಫೆ.18ರವರೆಗೆ ನೋಂದಾಯಿಸಿಕೊಳ್ಳಬಹುದು ಎಂದು ಆಯೋಗವು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಫೆ.19ರಿಂದ 25ರವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗುತ್ತದೆ ಎಂದು ಆಯೋಗ ತಿಳಿಸಿದೆ. ಪೂರ್ವಭಾವಿ ಪರೀಕ್ಷೆಯು ಮೇ 25ರಂದು ನಿಗದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.