ADVERTISEMENT

ಸಿವಿಲ್ ಸರ್ವಿಸ್‌ ಪ್ರಿಲಿಮ್ಸ್ 2020: ಪರೀಕ್ಷೆ ಮುಂದೂಡುವುದು ಅಸಾಧ್ಯ–ಯುಪಿಎಸ್‌ಸಿ

ಸುಪ್ರೀಂ_ಕೋರ್ಟ್‌ನಲ್ಲಿ ಪ್ರಕರಣ

ಏಜೆನ್ಸೀಸ್
Published 28 ಸೆಪ್ಟೆಂಬರ್ 2020, 6:48 IST
Last Updated 28 ಸೆಪ್ಟೆಂಬರ್ 2020, 6:48 IST
ಯುಪಿಎಸ್‌ಸಿ ಪರೀಕ್ಷ
ಯುಪಿಎಸ್‌ಸಿ ಪರೀಕ್ಷ   

ನವದೆಹಲಿ: ಈ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (2020) ಮುಂದೂಡುವುದು ಅಸಾಧ್ಯ ಎಂದು ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈಗಾಗಲೇ ಪರೀಕ್ಷೆಗೆ ನಡೆಸಬೇಕಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಿಯಾಗಿದೆ ಎಂದು ಯುಪಿಎಸ್‌ಸಿ ಹೇಳಿದೆ.

ಅಕ್ಟೋಬರ್‌ 4ರಂದು ಯುಪಿಎಸ್‌ಸಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದೆ. ಕೋವಿಡ್‌–19 ಕಾರಣದಿಂದಾಗಿ ಈ ಬಾರಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ನಾಗರಿಕ ಸೇವೆಗಳ ಆಕಾಂಕ್ಷಿಗಳಲ್ಲಿ ಕೆಲವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್‌ ನೇತೃತ್ವದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿದ್ದು, ಸಜ್ಜುಗಳಿಸಲಾಗಿರುವ ಕಾರ್ಯಗಳು ಹಾಗೂ ಇತರೆ ಮಾಹಿತಿಗಳನ್ನು ಒಳಗೊಂಡ ಅಫಿಡವಿಟ್‌ ಸಲ್ಲಿಸುವಂತೆ ಯುಪಿಎಸ್‌ಸಿಗೆ ಸೂಚಿಸಿದೆ. ಸೆಪ್ಟೆಂಬರ್‌ 30ಕ್ಕೆ ವಿಚಾರಣೆ ಮುಂದೂಡಲಾಗಿದೆ.

ADVERTISEMENT

ಈ ವರ್ಷದ ಯುಪಿಎಸ್‌ಸಿ ಪ್ರಿಲಿಮ್ಸ್‌ ಪರೀಕ್ಷೆಗೆ ಸುಮಾರು 6 ಲಕ್ಷ ಅಭ್ಯರ್ಥಿಗಳು ಹಾಜರಾಗುವ ಸಾಧ್ಯತೆ ಇದೆ. ದೇಶದ 72 ನಗರಗಳಲ್ಲಿ ಹಲವು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಮೇ 31ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಕೋವಿಡ್‌ ಕಾರಣಗಳಿಂದಾಗಿ ಮುಂದೂಡಲಾಗಿತ್ತು. ಜೂನ್‌ 5ರಂದು ಯುಪಿಎಸ್‌ಸಿ ಪರಿಷ್ಕೃತ ಪರೀಕ್ಷಾ ಪಟ್ಟಿ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.