ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ನಾಗರಿಕ ಸೇವೆಗೆ ಹೋಗಬಯಸುವವರಿಗಾಗಿ ನಡೆಸುವ ಪೂರ್ವಭಾವಿ ಪರೀಕ್ಷೆಯನ್ನು ಜೂನ್ 16ಕ್ಕೆ ಮುಂದೂಡಿದೆ.
ಈ ಹಿಂದೆ ಮೇ 26ರಂದು ಪೂರ್ವಭಾವಿ ಪರೀಕ್ಷೆ ನಡೆಸುವುದಾಗಿ ಯುಪಿಎಸ್‌ಸಿ ಅಧಿಸೂಚನೆ ಹೊರಡಿಸಿತ್ತು. ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಪರೀಕ್ಷೆ ಮುಂದೂಡಿರುವುದಾಗಿ ಮಂಗಳವಾರ ಪ್ರಕಟಿಸಿದೆ.
‘ಭಾರತೀಯ ಅರಣ್ಯ ಸೇವೆ ಪರೀಕ್ಷೆಯ ಸ್ಕ್ರೀನಿಂಗ್ ಟೆಸ್ಟ್ ಕೂಡ ಇದಾಗಿದೆ’ ಎಂದು ಯುಪಿಎಸ್‌ಸಿ ತಿಳಿಸಿದೆ.
ಈ ವರ್ಷ ಅಂದಾಜು 1056 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಯುಪಿಎಸ್‌ಸಿ ಪರೀಕ್ಷೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.