ದೇವೇಂದ್ರ ಫಡಣವೀಸ್
ನಾಗ್ಪುರ: ’ಸರ್ಕಾರವನ್ನು ಟೀಕಿಸುವವರ ವಿರುದ್ಧ ಯಾವುದೇ ಕ್ರಮಕೈಗೊಳ್ಳುವುದಿಲ್ಲ. ಆದರೆ, ನಗರ ನಕ್ಸಲರಂತೆ ವರ್ತಿಸುವವರನ್ನು ಬಂಧಿಸಲಾಗುವುದು‘ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರ ಸರ್ಕಾರ ರೂಪಿಸಿರುವ ‘ವಿಶೇಷ ಸಾರ್ವಜನಿಕ ಸುರಕ್ಷತಾ ಮಸೂದೆ– 2024’ ಅಡಿಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಬಂಧಿಸುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನಾದ ಅಧ್ಯಕ್ಷ ರಾಜ್ ಠಾಕ್ರೆ ಸವಾಲೆಸೆದಿದ್ದರು. ಇದಕ್ಕೆ ತಿರುಗೇಟು ನೀಡಿರುವ ಫಡಣವೀಸ್, ‘ಸರ್ಕಾರವನ್ನು ಟೀಕಿಸುವವರ ವಿರುದ್ಧ ನೂತನ ಮಸೂದೆಯ ಮೂಲಕ ಕ್ರಮ ಕೈಗೊಳ್ಳುವುದಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು.
ನಗರ ನಕ್ಸಲ್ ಸಿದ್ಧಾಂತ ಮತ್ತು ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವ ಎಡ ಪಂಥೀಯ ಸಂಘಟನೆಗಳ ನಿಗ್ರಹಕ್ಕಾಗಿ ಮಹಾರಾಷ್ಟ್ರ ಸರ್ಕಾರ ರೂಪಿಸಿರುವ ‘ವಿಶೇಷ ಸಾರ್ವಜನಿಕ ಸುರಕ್ಷತಾ ಮಸೂದೆ 2024’ ವಿಧಾನಸಭಾ ಅಧಿವೇಶನದಲ್ಲಿ ಇತ್ತೀಚೆಗೆ ಅಂಗೀಕಾರಗೊಂಡಿದೆ.
ವಿಶೇಷ ಸಾರ್ವಜನಿಕ ಸುರಕ್ಷತಾ ಮಸೂದೆಗೆ ವಿರೋಧ ಪಕ್ಷಗಳು ಮತ್ತು ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.