ನವದೆಹಲಿ: ರಾಜ್ಯಕ್ಕೆ ಹಂಚಿಕೆಯಾಗಿರುವ 3.36 ಲಕ್ಷ ಟನ್ ಯೂರಿಯಾವನ್ನು ಕೂಡಲೇ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.
‘ಕರ್ನಾಟಕದಲ್ಲಿ ಮುಂಗಾರು ಬೇಗ ಪ್ರಾರಂಭವಾಗಿದ್ದು ಸರಾಸರಿಗಿಂತ ಶೇ 3ರಷ್ಟು ಹೆಚ್ಚು ಮಳೆಯಾಗಿದ್ದರಿಂದ ಬಿತ್ತನೆಗೆ ನಿರೀಕ್ಷೆಗೂ ಮುಂಚೆ ಚಾಲನೆ ಸಿಕ್ಕಿದೆ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ 114.40 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. 160.68 ಲಕ್ಷ ಟನ್ ಆಹಾರಧಾನ್ಯಗಳು ಮತ್ತು ಎಣ್ಣೆಕಾಳುಗಳ ಉತ್ಪಾದನಾ ಗುರಿ ಹೊಂದಲಾಗಿದೆ. ಮುಂಗಾರು ಹಂಗಾಮಿಗೆ 82.50 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು 81.85 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
‘ಮುಂಗಾರು ಹಂಗಾಮಿಗೆ 26.77 ಲಕ್ಷ ಟನ್ ರಸಾಯನಿಕ ರಸಗೊಬ್ಬರಗಳ ಅಗತ್ಯ ಇದೆ. 3.36 ಲಕ್ಷ ಟನ್ ಯೂರಿಯಾ ರಸಗೊಬ್ಬರ ಕೊರತೆ ಉಂಟಾಗಿದೆ. ಕರ್ನಾಟಕದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡಿಲ್ಲ. ರೈತರ ಹಿತ ಗಮನದಲ್ಲಿಟ್ಟುಕೊಂಡು ಕೂಡಲೇ ಯೂರಿಯಾ ಪೂರೈಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.