ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟಿ ಊರ್ವಶಿ ರೌಟೆಲಾ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಮಂಗಳವಾರ ವಿಚಾರಣೆಗೆ ಹಾಜರಾಗಿದ್ದಾರೆ.
1xಬೆಟ್ ಆ್ಯಪ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಅವರನ್ನು ಪ್ರಶ್ನಿಸಿದ ಇ.ಡಿ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಅವರ ಹೇಳಿಕೆ ದಾಖಲಿಸಿಕೊಂಡಿದೆ.
ಈ ತನಿಖೆಯ ಭಾಗವಾಗಿ ಕೆಲವು ವಾರಗಳಿಂದ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಸುರೇಶ್ ರೈನಾ, ಶಿಖರ್ ಧವನ್, ರಾಬಿನ್ ಉತ್ತಪ್ಪ ಹಾಗೂ ಟಿಎಂಸಿ ಮಾಜಿ ಸಂಸದೆ, ನಟಿ ಮಿಮಿ ಚಕ್ರವರ್ತಿ, ಬಂಗಾಳಿ ನಟ ಅಂಕುಶ್ ಹಜ್ರಾ ಅವರನ್ನು ಇ.ಡಿ ವಿಚಾರಣೆಗೊಳಪಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.