ADVERTISEMENT

ಮುಂಬೈ: ಅಮೆರಿಕದ ಕಾನ್ಸುಲೇಟ್‌ ಕಚೇರಿಗೆ ಹುಸಿ ಬಾಂಬ್‌ ಬೆದರಿಕೆ

ಪಿಟಿಐ
Published 15 ಜೂನ್ 2025, 14:34 IST
Last Updated 15 ಜೂನ್ 2025, 14:34 IST
   

ಮುಂಬೈ: ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಎಂಸಿ) ಅಮೆರಿಕದ ಕಾನ್ಸುಲೇಟ್‌ ಕಚೇರಿಗೆ ಹುಸಿ ಬಾಂಬ್‌ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 

ವ್ಯಕ್ತಿಯೊಬ್ಬ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಕಾನ್ಸುಲೇಟ್‌ಗೆ ಕರೆ ಮಾಡಿ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಸ್ಥಳವನ್ನು ಪರಿಶೀಲಿಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಈ ಕುರಿತು ಪ‍್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬಿಎಂಸಿಯ ಪೊಲೀಸರು ತಿಳಿಸಿದ್ದಾರೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT