ADVERTISEMENT

ಮಸೂದ್‌ಗೆ ನಿಷೇಧ: ಚೀನಾ ನಡೆಗೆ ಭಾರತ ಅಸಮಾಧಾನ, ಅಮೆರಿಕ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2019, 8:52 IST
Last Updated 14 ಮಾರ್ಚ್ 2019, 8:52 IST
   

ನವದೆಹಲಿ:ಜೈಷ್‌–ಎ-ಮೊಹಮ್ಮದ್‌ ಸಂಘಟನೆ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸುವ ನಿರ್ಣಯಕ್ಕೆ ಚೀನಾ ವಿರೋಧ ವ್ಯಕ್ತಪಡಿಸಿರುವುದಕ್ಕೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಚೀನಾ ನಡೆ ತೀವ್ರ ನಿರಾಸೆ ಉಂಟುಮಾಡಿದೆ,ಜೈಷ್‌–ಎ-ಮೊಹಮ್ಮದ್‌ ಉಗ್ರ ಸಂಘಟನೆ ಭಾರತದ ನೆಲದಲ್ಲಿ ನಡೆಸಿರುವ ಭಯೋತ್ಪಾದಕ ದಾಳಿಗಳಿಗೆ ಸಂಬಂಧಿಸಿದಂತೆ ಸೂಕ್ತ ಪುರಾವೆಗಳು ಇದ್ದರೂ ಚೀನಾದ ಈ ನಡೆ ಅಸಮಾಧಾನ ತಂದಿದೆ ಎಂದು ಭಾರತ ಹೇಳಿದೆ.

ಮಸೂದ್‌ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸುವ ನಿರ್ಣಯವನ್ನು ಬೆಂಬಲಿಸಿರುವ ದೇಶಗಳಿಗೂ ಭಾರತ ಧನ್ಯವಾದ ಅರ್ಪಿಸಿದೆ. ಬುಧವಾರ ತಡ ರಾತ್ರಿ ಜರ್ಮನಿ ಕೂಡ ಮಸೂದ್‌ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿಸುವುದಕ್ಕೆ ಸಹಮತ ವ್ಯಕ್ತಪಡಿಸಿದೆ.

ADVERTISEMENT

ಚೀನಾ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕ, ಚೀನಾ ಹೀಗೆ ಮುಂದುವರೆದರೆನಾವು ಬೇರೆ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದುವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಎಚ್ಚರಿಕೆ ನೀಡಿದೆ.

ಅಮೆರಿಕದ ಖಡಕ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಚೀನಾ, ಪಾಕಿಸ್ತಾನ ಸೇರಿದಂತೆ ಯಾವುದೇ ದೇಶಗಳಲ್ಲಿನ ಭಯೋತ್ಪಾದಕರನ್ನು ರಕ್ಷಣೆ ಮಾಡುತ್ತಿಲ್ಲ ಎಂದು ಚೀನಾ ಹೇಳಿದೆ.

ಮಸೂದ್‌ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸುವ ಪ್ರಸ್ತಾವವನ್ನು ಫ್ರಾನ್ಸ್‌, ಬ್ರಿಟನ್‌ ಮತ್ತು ಅಮೆರಿಕ ಫೆಬ್ರುವರಿ 27ರಂದು ಮಂಡಿಸಿದ್ದವು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಲ್‌ಖೈದಾ ನಿರ್ಬಂಧ ಸಮಿತಿ ಅಡಿಯಲ್ಲಿ ಈ ಪ್ರಸ್ತಾವ ಮಂಡಿಸಲಾಗಿದೆ. ಆದರೆಮಸೂದ್‌ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡುವ ನಿರ್ಣಯವನ್ನು ಚೀನಾ ವಿರೋಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.