ನವದೆಹಲಿ: ಭಾರತದಲ್ಲಿ ವೀಸಾ ನೀಡುವ ಪ್ರಕ್ರಿಯೆಗೆ ಚುರುಕು ನೀಡುವ ಸಂಬಂಧ ಅಮೆರಿಕ ಕೆಲ ನೂತನ ಕ್ರಮಗಳಿಗೆ ಚಾಲನೆ ನೀಡಿದೆ.
‘ವೀಸಾ ಕೋರಿ ಮೊದಲ ಬಾರಿಗೆ ಅರ್ಜಿ ಸಲ್ಲಿಸುವವರಿಗೆ ವಿಶೇಷ ಸಂದರ್ಶನ ಆಯೋಜನೆ, ಕಾನ್ಸುಲೇಟ್ ಕಚೇರಿಗಳಲ್ಲಿ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಜ.21ರಂದು ಈ ನೂತನ ಕ್ರಮಗಳಿಗೆ ಚಾಲನೆ ನೀಡಲಾಗಿದೆ’ ಎಂದು ಅಮೆರಿಕ ರಾಯಭಾರ ಕಚೇರಿ ಭಾನುವಾರ ತಿಳಿಸಿದೆ.
ಈ ಕ್ರಮದ ಭಾಗವಾಗಿ, ದೆಹಲಿಯಲ್ಲಿರುವ ರಾಯಭಾರ ಕಚೇರಿ, ಮುಂಬೈ, ಚೆನ್ನೈ, ಕೋಲ್ಕತ್ತ ಹಾಗೂ ಹೈದರಾಬಾದ್‌ನಲ್ಲಿರುವ ಕಾನ್ಸುಲೇಟ್ ಕಚೇರಿಗಳಲ್ಲಿ ‘ಶನಿವಾರ ವಿಶೇಷ ಸಂದರ್ಶನ’ ಹೆಸರಿನ ಕಾರ್ಯಕ್ರಮದಡಿ ಜ.21ರಂದು ವೀಸಾ ನೀಡಲು ಸಂದರ್ಶನ ನಡೆಸಲಾಯಿತು ಎಂದೂ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.