ADVERTISEMENT

ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾಗೆ ಕೋವಿಡ್ ಪಾಸಿಟಿವ್: ಭಾರತದ ಸಭೆಗಳು ರದ್ದು

ಪಿಟಿಐ
Published 24 ಮಾರ್ಚ್ 2023, 4:31 IST
Last Updated 24 ಮಾರ್ಚ್ 2023, 4:31 IST
ವಿಶ್ವ ಬ್ಯಾಂಕ್‌ ಅಧ್ಯಕ್ಷ ಅಜಯ್‌ ಬಾಂಗಾ
ವಿಶ್ವ ಬ್ಯಾಂಕ್‌ ಅಧ್ಯಕ್ಷ ಅಜಯ್‌ ಬಾಂಗಾ    

ನವದೆಹಲಿ: ಭಾರತ ಮೂಲದ ಉದ್ಯಮಿ, ವಿಶ್ವ ಬ್ಯಾಂಕ್‌ ಅಧ್ಯಕ್ಷ ಅಜಯ್‌ ಬಾಂಗಾ ಅವರಿಗೆ ಕೋವಿಡ್‌ ದೃಢಪಟ್ಟಿದ್ದು, ಎರಡು ದಿನಗಳ ಭಾರತ ಪ್ರವಾಸದ ವೇಳೆ ನಿಗದಿಯಾಗಿದ್ದ ಅವರ ಸಭೆಗಳನ್ನು ರದ್ದುಗೊಳಿಸಲಾಗಿದೆ.

ಅಜಯ್‌ ಬಾಂಗಾ ಅವರು ಕ್ವಾರಂಟೈನ್‌ನಲ್ಲಿರುವ ಕಾರಣ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ನಡೆಯಬೇಕಿದ್ದ ಸಭೆ ರದ್ದಾಗಿದೆ ಎಂದು ವಿತ್ತ ಸಚಿವಾಲಯದ ತಿಳಿಸಿದೆ.

ಬಂಗಾ ಅವರು ಮಾರ್ಚ್ 23, 24 ರಂದು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೇರಿದಂತೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದರು.

ADVERTISEMENT

ದೆಹಲಿಗೆ ಗುರುವಾರ ಬಂದಿಳಿದ ಅವರು ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದರು. ಪರೀಕ್ಷೆಯಲ್ಲಿ ಅಜಯ್‌ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಅವರಿಗೆ ಯಾವುದೇ ರೋಗಲಕ್ಷಣಗಳು ಕಾಣಿಸಿಕೊಂಡಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಅವರು ಪ್ರತ್ಯೇಕವಾಸದಲ್ಲಿದ್ದಾರೆ (ಕ್ವಾರಂಟೈನ್‌) ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆ.23ರಂದು ಅಜಯ್‌ ಬಾಂಗಾ ಅವರನ್ನು ವಿಶ್ವ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ ಅಮೆರಿಕವು ನಾಮನಿರ್ದೇಶನ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ತಿಳಿಸಿದ್ದರು.

63 ವರ್ಷದ ಅಜಯ್‌ ಅವರು ಈ ಹಿಂದೆ ಮಾಸ್ಟರ್‌ಕಾರ್ಡ್‌ನ ಅಧ್ಯಕ್ಷ ಹಾಗೂ ಸಿಇಒ ಆಗಿ ಕೆಲಸ ಮಾಡಿದ್ದರು. ಸದ್ಯ ಅವರು ಜನರಲ್‌ ಅಟ್ಲಾಂಟಿಕ್‌ನ ಉಪಾಧ್ಯಕ್ಷರಾಗಿದ್ದಾರೆ. 2016ರಲ್ಲಿ ಅವರಿಗೆ ಪದ್ಮಶ್ರೀ ಗೌರವ ಒಲಿದಿತ್ತು. ಭಾರತ ಮೂಲದ ಉದ್ಯಮಿ, ವಿಶ್ವ ಬ್ಯಾಂಕ್‌ ಅಧ್ಯಕ್ಷ ಅಜಯ್‌ ಬಾಂಗಾ ಅವರಿಗೆ ಕೋವಿಡ್‌ ದೃಢಪಟ್ಟಿದ್ದು, ಎರಡು ದಿನಗಳ ಭಾರತ ಪ್ರವಾಸದ ವೇಳೆ ನಿಗದಿಯಾಗಿದ್ದ ಅವರ ಸಭೆಗಳನ್ನು ರದ್ದುಗೊಳಿಸಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.