ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವ ದಿನಾಂಕ ಕುರಿತು ಭಾರತ ಮತ್ತು ಅಮೆರಿಕದ ನಡುವೆ ಮಾತುಕತೆ ನಡೆಯುತ್ತಿದ್ದು, ಫೆಬ್ರುವರಿಯಲ್ಲಿ ಟ್ರಂಪ್ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಮೆರಿಕದ ಸೆನೆಟ್‌ನಲ್ಲಿ ಟ್ರಂಪ್ ವಿರುದ್ಧ ವಾಗ್ದಂಡನೆಗೆ ಈ ವಾರ ಮತದಾನ ನಡೆಯುವ ಸಾಧ್ಯತೆ ಇದ್ದು, ಇದರ ಆಧಾರದ ಮೇಲೆ ಟ್ರಂಪ್ ಭಾರತ ಭೇಟಿಯ ದಿನಾಂಕ ನಿಗದಿಪಡಿಸಲಾಗುವುದು ಎಂದು ಎನ್‌ಡಿ ಟಿವಿ ತಿಳಿಸಿದೆ.
ಜ. 7ರಂದು ಪ್ರಧಾನಿ ನರೇಂದ್ರ ಮೋದಿ, ಟ್ರಂಪ್ ಅವರಿಗೆ ಕರೆ ಮಾಡಿ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದರು. ಅಂದು ಭಾರತ–ಅಮೆರಿಕದ ನಡುವಿನ ಸಂಬಂಧಗಳ ಬಗ್ಗೆ ಇಬ್ಬರೂ ಚರ್ಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.