ಒಡಿಶಾದ ಭುವನೇಶ್ವರದಲ್ಲಿ ಶುಕ್ರವಾರ ಆಯೋಜನೆಗೊಂಡಿದ್ದ ರ‍್ಯಾಲಿಯಲ್ಲಿ ಪಾಲ್ಗೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಜನರತ್ತ ಕೈಬೀಸಿದರು
ಪಿಟಿಐ ಚಿತ್ರ
ಭುವನೇಶ್ವರ: ‘ಒಡಿಶಾದ ಪುರಿಯಲ್ಲಿರುವ ಭಗವಾನ್ ಜಗನ್ನಾಥನ ದರ್ಶನ ಮಾಡುವ ಉದ್ದೇಶದಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಾಷಿಂಗ್ಟನ್ ಭೇಟಿಯ ಆಹ್ವಾನವನ್ನು ನಿರಾಕರಿಸಿದೆ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
ಭುವನೇಶ್ವರದಲ್ಲಿ ಆಯೋಜನೆಗೊಂಡಿದ್ದ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಕೆನಡಾದಲ್ಲಿ ಆಯೋಜನೆಗೊಂಡಿದ್ದ ಜಿ7 ಶೃಂಗದಲ್ಲಿ ಪಾಲ್ಗೊಂಡಿದ್ದೆ. ಅಲ್ಲಿ ಭೇಟಿಯಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನನ್ನನ್ನು ವಾಷಿಂಗ್ಟನ್‌ಗೆ ಆಹ್ವಾನಿಸಿ, ಔತಣ ಕೂಟದಲ್ಲಿ ಪಾಲ್ಗೊಳ್ಳುವಂತೆ ಕೋರಿದರು’ ಎಂದಿದ್ದಾರೆ.
‘ಅವರ ಆಹ್ವಾನಕ್ಕೆ ಧನ್ಯವಾದ ತಿಳಿಸಿದ ನಾನು, ಒಡಿಶಾದಲ್ಲಿರುವ ಭಗವಾನ್ ಜಗನ್ನಾಥನ ದರ್ಶನಕ್ಕೆ ಹೋಗಲೇಬೇಕರಿವುದರಿಂದ ತಮ್ಮ ಆಹ್ವಾನ ನಿರಾಕರಿಸುತ್ತಿರುವುದಾಗಿ ತಿಳಿಸಿದೆ’ ಎಂದಿದ್ದಾರೆ.
ಒಡಿಶಾದಲ್ಲಿ ರಚನೆಯಾಗಿರುವ ಬಿಜೆಪಿ ಸರ್ಕಾರದ ಮೊದಲ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಅವರು ₹18,600 ಕೋಟಿಯ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.