ನವದೆಹಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಸಂಘರ್ಷ ತೀವ್ರಗೊಂಡ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳನ್ನು ಸ್ಥಳಾಂತರಗೊಳಿಸಲು ‘ಆಪರೇಷನ್ ಸಿಂಧು’ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ(ಎಂಇಎ) ತಿಳಿಸಿದೆ.
‘ವಿದೇಶಗಳಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಭಾರತವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ’ ಎಂದು ಅದು ತಿಳಿಸಿದೆ.
‘ಜೂನ್ 17ರಂದು ಇರಾನ್ ಮತ್ತು ಅರ್ಮೇನಿಯಾದಲ್ಲಿರುವ ನಮ್ಮ ನಿಯೋಗಗಳ ಮೇಲ್ವಿಚಾರಣೆಯಲ್ಲಿ ಉತ್ತರ ಇರಾನ್‌ನಿಂದ ಅರ್ಮೇನಿಯಾಗೆ ಬಂದ 110 ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ವಿಶೇಷ ವಿಮಾನದಲ್ಲಿ ಅವರು ಯೆರೆವಾನ್‌ನಿಂದ ಹೊರಟಿದ್ದು, ಜೂನ್ 19ರ ಮುಂಜಾನೆ ದೆಹಲಿಗೆ ಆಗಮಿಸಲಿದ್ದಾರೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ‘ಎಕ್ಸ್‘ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಇರಾನ್‌ನಲ್ಲಿ 4 ಸಾವಿರಕ್ಕೂ ಹೆಚ್ಚು ಭಾರತೀಯ ಪ್ರಜೆಗಳಿದ್ದು, ಅವರಲ್ಲಿ ಅರ್ಧದಷ್ಟು ವಿದ್ಯಾರ್ಥಿಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.