ADVERTISEMENT

SIRಗೆ ಶಾಲಾ ವಿದ್ಯಾರ್ಥಿಗಳ ಬಳಕೆ ಶಿಕ್ಷಣ ಹಕ್ಕು ಉಲ್ಲಂಘನೆ:ಕೇರಳ ಸಚಿವ ಶಿವಕುಟ್ಟಿ

ಪಿಟಿಐ
Published 25 ನವೆಂಬರ್ 2025, 12:23 IST
Last Updated 25 ನವೆಂಬರ್ 2025, 12:23 IST
   

ತಿರುವನಂತಪುರ(ಕೇರಳ): ಶಾಲಾ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಗಾಗಿ(ಎಸ್‌ಐಆರ್‌) ಸ್ವಯಂಸೇವಕರಾಗಿ ಬಳಸಿಕೊಂಡರೆ ಅದು ಅವರ ಅಧ್ಯಯನದ ಮೇಲೆ ಪರಿಣಾಮ ಬೀರುವುದಲ್ಲದೆ, ಅವರ ಶಿಕ್ಷಣದ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಮಂಗಳವಾರ ಹೇಳಿದ್ದಾರೆ.

ಶಾಲೆಗಳಲ್ಲಿ ಅಧ್ಯಯನಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿರುವುದರಿಂದ ಮತ್ತು ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ಎನ್‌ಎಸ್‌ಎಸ್‌ ಮತ್ತು ಎನ್‌ಸಿಸಿ ವಿದ್ಯಾರ್ಥಿಗಳನ್ನು ಚುನಾವಣಾ ಕೆಲಸಕ್ಕೆ ಸ್ವಯಂಸೇವಕರಾಗಿ ಬಳಸಿಕೊಳ್ಳುವ ನಿರ್ಧಾರವು ಯಾವುದೇ ಸಂದರ್ಭದಲ್ಲೂ ಸ್ವೀಕಾರಾರ್ಹವಲ್ಲ ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

ಕೇರಳದ ಮುಖ್ಯ ಚುನಾವಣಾಧಿಕಾರಿಗಳು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ(ಎಸ್‌ಐಆರ್) ಸಂಬಂಧಿಸಿದ ಚಟುವಟಿಕೆಗಳಿಗೆ ಶಾಲಾ ವಿದ್ಯಾರ್ಥಿಗಳನ್ನು ಸ್ವಯಂಸೇವಕರಾಗಿ ಬಳಸಬಹುದು ಎಂದು ಹೇಳಿದ್ದಾರೆ ಎಂಬ ವರದಿಗಾರರ ಪ್ರಶ್ನೆಗಳಿಗೆ ಸಚಿವರು ಉತ್ತರಿಸುತ್ತಿದ್ದರು.

ADVERTISEMENT

‘ಇದು ನಮ್ಮ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಸಂದರ್ಭದಲ್ಲೂ ವಿದ್ಯಾರ್ಥಿಗಳಿಗೆ ಈ ರೀತಿಯ ಜವಾಬ್ದಾರಿಯನ್ನು ನೀಡಬಾರದು. ಮತದಾರರ ಪಟ್ಟಿಗೆ ಸಂಬಂಧಿಸಿದ ದತ್ತಾಂಶ ಸಂಗ್ರಹಣೆ ಮತ್ತು ಡಿಜಿಟಲೀಕರಣ ಕೆಲಸಕ್ಕಾಗಿ 10 ದಿನಗಳಿಗಿಂತ ಹೆಚ್ಚು ಕಾಲ ವಿದ್ಯಾರ್ಥಿಗಳನ್ನು ತರಗತಿಗಳಿಂದ ದೂರವಿಡುವುದು ಅವರ ಪರೀಕ್ಷೆಗಳ ಮೇಲೆ ಪರಿಣಾಮ ಬೀರುತ್ತದೆ. ಶೈಕ್ಷಣಿಕ ಸಮಯದಲ್ಲಿ ವಿದ್ಯಾರ್ಥಿಗಳು ಶಾಲೆಯಿಂದ ಹೊರಬರಲು ಅವಕಾಶ ನೀಡಬಾರದು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ತರಗತಿ ಸಮಯದಲ್ಲಿ ವಿದ್ಯಾರ್ಥಿಗಳನ್ನು ಬೇರೆ ಯಾವುದೇ ಕಾರ್ಯಕ್ರಮಕ್ಕೆ ಕರೆಯಬಾರದು ಎಂಬ ಆದೇಶ ಇದೆ’ಎಂದು ಶಿವನ್‌ಕುಟ್ಟಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.