ADVERTISEMENT

ಅತ್ಯಾಚಾರ ಸಂತ್ರಸ್ತ ಅಪ್ರಾಪ್ತೆಗೆ ಹೆರಿಗೆ, ಮಗು ಸಾವು

ಪಿಟಿಐ
Published 19 ಫೆಬ್ರುವರಿ 2021, 8:04 IST
Last Updated 19 ಫೆಬ್ರುವರಿ 2021, 8:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿತ್ರಕೂಟ (ಉತ್ತರ ಪ್ರದೇಶ): ಅತ್ಯಾಚಾರಕ್ಕೊಳಗಾಗಿದ್ದ 13 ವರ್ಷದ ಬಾಲಕಿಯೊಬ್ಬಳು ಗುರುವಾರ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಕೆಲವೇ ನಿಮಿಷಗಳಲ್ಲಿ ಮಗು ಮೃತಪಟ್ಟಿದೆ.

ಆರೋಪಿ ಸಿಕಂದರ್‌ ಅಲಿಯಾಸ್ ಅಮರನಾಥ್‌ ತಿವಾರಿ ಎಂಬಾತನನ್ನು ಬಂಧಿಸಲಾಗಿದ್ದು, ಮಗುವಿನ ಮರಣೋತ್ತರ ಪರೀಕ್ಷೆ ಮತ್ತು ಡಿಎನ್‌ಎ ಪರೀಕ್ಷೆಗಳ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ವೀರೇಂದ್ರ ತ್ರಿಪಾಠಿ ತಿಳಿಸಿದ್ದಾರೆ.‌

ಕಳೆದ ಆಗಸ್ಟ್‌ನಲ್ಲಿ ತನ್ನ ಮನೆಗೆ ಕರೆಸಿಕೊಂಡು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ, ಬಳಿಕ ಬೆದರಿಕೆ ಒಡ್ಡಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇದೇ 7ರಂದು ಬಾಲಕಿ ಗರ್ಭಿಣಿ ಎಂದು ಗೊತ್ತಾದ ಬಳಿಕ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯನ್ನು ಇದೇ 9ರಂದು ಬಂಧಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.