ADVERTISEMENT

ಯು.ಪಿ | ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ: 26 ವರ್ಷದ ವ್ಯಕ್ತಿಯ ಬಂಧನ

ಪಿಟಿಐ
Published 2 ಜೂನ್ 2025, 11:37 IST
Last Updated 2 ಜೂನ್ 2025, 11:37 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬಲ್ಲಿಯಾ (ಉತ್ತರ ಪ್ರದೇಶ): 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದಲ್ಲಿ 26 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ADVERTISEMENT

ಅಪ್ರಾಪ್ತ ಬಾಲಕಿ ಇದ್ದ ಬಲ್ಲಿಯಾ ಜಿಲ್ಲೆಯ ಹಳ್ಳಿಯಲ್ಲಿ ವಾಸಿಸುತ್ತಿದ್ದ ಪ್ರೇಮ್ ಕುಮಾರ್ ರಾಮ್, ಮೇ 25 ರಂದು ಆಕೆಯನ್ನು ಅಪಹರಿಸಿ ಮಧ್ಯಪ್ರದೇಶದ ಸತ್ನಾಗೆ ಕರೆದೊಯ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ, ಪ್ರೇಮ್ ವಿರುದ್ಧ ಬಿಎನ್ಎಸ್ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮೂರು ದಿನಗಳ ಹಿಂದೆ ಸತ್ನಾದಲ್ಲಿ ಬಾಲಕಿಯ ತಂದೆ ಆಕೆಯನ್ನು ರಕ್ಷಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರೇಮ್ ತನ್ನನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಬಾಲಕಿ ವಿಚಾರಣೆಯ ವೇಳೆ ತಿಳಿಸಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರೇಮ್‌ನನ್ನು ಸೋಮವಾರ ಆತನ ನಿವಾಸದ ಬಳಿ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಬಲ್ಲಿಯಾ ಪೊಲೀಸ್ ವರಿಷ್ಠಾಧಿಕಾರಿ ಓಂವೀರ್ ಸಿಂಗ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.