ADVERTISEMENT

ಉತ್ತರ ಪ್ರದೇಶದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2022, 1:36 IST
Last Updated 19 ಅಕ್ಟೋಬರ್ 2022, 1:36 IST
   

ಅಜಂಗಢ: 8 ವರ್ಷದ ಬಾಲಕಿಯನ್ನು ಪಕ್ಕದ ಮನೆಯವನೇ ಅತ್ಯಾಚಾರಗೈದು, ಕೊಲೆ ಮಾಡಿರುವ ದುರ್ಘಟನೆ ಸೋಮವಾರ ರಾತ್ರಿ ನಡೆದಿದೆ. ಸ್ಥಳದಲ್ಲಿಯೇ ಸಾಕ್ಷಿ ಲಭಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮನೆಯಿಂದ 100 ಮೀಟರ್‌ ದೂರದಲ್ಲಿರುವ ಪಕ್ಕದ ಮನೆಯವನೇ ಅತ್ಯಾಚಾರ ಮಾಡಿದ್ದಾನೆ. ಪ್ರಾಥಮಿಕ ತನಿಖೆಯಲ್ಲಿ ಸಾಕ್ಷ್ಯ ದೊರೆತಿದ್ದು ಆರೋಪಿ ಲಕ್ಷ್ಮಣ ಎಂಬಾತನನ್ನು ಬಂಧಿಸಲಾಗಿದೆ. ಬಾಲಕಿಯನ್ನು ಚಾಕಲೆಟ್‌ ಕೊಡುವ ನೆಪದಲ್ಲಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅತ್ಯಾಚಾರ ಎಸಗಿದ ಬಳಿಕ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಎಸ್‌ಪಿ ಅನುರಾಗ್‌ ಆರ್ಯ ಹೇಳಿದ್ದಾರೆ.

ಆರೋಪಿ ಲಕ್ಷ್ಮಣ ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದು, ಡ್ರಗ್‌ ಸೇವಿಸುತ್ತಿದ್ದ. ಬಾಲಕಿ ಮನೆಗೆ ಬಾರದಿರುವುದನ್ನು ಗಮನಿಸಿದ ಪಾಲಕರು ಹುಡಕಲು ಆರಂಭಿಸಿದ್ದಾರೆ. ಆಗ ಅಜ್ಞಾತ ಸ್ಥಳದಲ್ಲಿ ಮೃತದೇಹ ಪತ್ತೆಯಾಗಿದೆ.

ADVERTISEMENT

ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.