ADVERTISEMENT

ಉತ್ತರಪ್ರದೇಶ: ಕಾಂಗ್ರೆಸ್ ಕಚೇರಿಯಲ್ಲಿ ಬಿಜೆಪಿ ಧ್ವಜಗಳು ಪತ್ತೆ!

ಐಎಎನ್ಎಸ್
Published 24 ಜುಲೈ 2022, 10:36 IST
Last Updated 24 ಜುಲೈ 2022, 10:36 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಲಖನೌ:ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿರುವಕಾಂಗ್ರೆಸ್ರಾಜ್ಯ ಘಟಕದ ಪ್ರಧಾನ ಕಚೇರಿಯಲ್ಲಿ ಬಿಜೆಪಿಯ ಧ್ವಜಗಳು ಪತ್ತೆಯಾಗಿವೆ.

ಇದರ ವಿಡಿಯೊ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದಜೀಶನ್ ಹೈದರ್ ಎಂಬುವರು ಕಾಂಗ್ರೆಸ್ ಕಚೇರಿಯಲ್ಲಿ ಬಿಜೆಪಿ ಧ್ವಜಗಳು ಕಾಣಿಸಿಕೊಂಡಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ ಎಂದು ಐಎಎನ್‌ಎಸ್‌ ಸುದ್ದಿ ಸಂಸ್ಥೆ ಹೇಳಿದೆ. ಹಾಗೇ ಕಾಂಗ್ರೆಸ್‌ ಕಚೇರಿಯಲ್ಲಿ ಬಿಜೆಪಿ ಧ್ವಜಗಳಿರುವ ವಿಡಿಯೊವನ್ನು ಟ್ವೀಟ್‌ ಮಾಡಿದೆ.

ವಿಡಿಯೊದಲ್ಲಿ ಬಿಜೆಪಿ ಧ್ವಜಗಳನ್ನು ಕಾಂಗ್ರೆಸ್‌ ಪದಾಧಿಕಾರಿಗಳು ಆಶ್ಚರ್ಯದಿಂದ ನೋಡುತ್ತಿರುವ ದೃಶ್ಯಗಳು ಇವೆ. ಈ ಘಟನೆ ಬಗ್ಗೆ ಜೀಶನ್ ಹೈದರ್ ಅವರು ‘ಕಾಂಗ್ರೆಸ್ ಕಚೇರಿಯಲ್ಲಿ ಬಿಜೆಪಿ ಪಕ್ಷದ ಧ್ವಜಗಳ ಪತ್ತೆಯಾದರೂ ಕಾಂಗ್ರೆಸ್‌ನವರಿಗೆ ಆಘಾತವಾಗಿಲ್ಲ. ಈ ಘಟನೆಯೂ ಕಾಂಗ್ರೆಸ್ ಪರಿಸ್ಥಿತಿಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ADVERTISEMENT

ಈ ಘಟನೆ ಬಗ್ಗೆ ಕಾಂಗ್ರೆಸ್‌ನ ಸ್ಥಳೀಯ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಕುರಿತು ತನಿಖೆ ನಡೆಸುವುದಾಗಿ ಉತ್ತರಪ್ರದೇಶದ ಯುವ ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.