ADVERTISEMENT

ಉತ್ತರ ಪ್ರದೇಶ | ಬಿಜೆ‍ಪಿ ಮುಖಂಡನ ಗುಂಡಿಕ್ಕಿ ಹತ್ಯೆ

ಪಿಟಿಐ
Published 7 ಮಾರ್ಚ್ 2024, 10:57 IST
Last Updated 7 ಮಾರ್ಚ್ 2024, 10:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೌನ್‌ಪುರ: ಬಿಜೆಪಿ ಮುಖಂಡರೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಜೌನ್‌ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಬೋಧಾಪುರ ನಿವಾಸಿ ಪ್ರಮೋದ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದ್ದು, ಜಿಲ್ಲಾ ಬಿಜೆಪಿ ಘಟಕದ ಸದಸ್ಯರಾಗಿದ್ದರು.

ಇಂದು (ಗುರುವಾರ) ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ADVERTISEMENT

ಪ್ರಮೋದ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಅಪರಿಚಿತರು ಕಾರನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಗೆ ಒಳಗಾದ ಪ್ರಮೋದ್‌ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಬದುಕುಳಿಯಲಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಸಿಕ್ರಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.