ಅಮೇಥಿ: ಉತ್ತರ ಪ್ರದೇಶದ ಅಯೋಧ್ಯಾ-ರಾಯ್‌ಬರೇಲಿ ರಾಷ್ಟೀಯ ಹೆದ್ದಾರಿಯ ರಾಣಿಗಂಜ್ ಬಳಿ ವೇಗವಾಗಿ ಬಂದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದು ಇಬ್ಬರು ಸವಾರರು ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.
ಮೃತ ಹುಸೇನ್ ಮುಜ್ತಬಾ (60) ಹಾಗೂ ಅಮೀರುಲ್ ಹಸನ್ (57) ಇಬ್ಬರು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ವೇಳೆ ವೇಗವಾಗಿ ಬಂದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಜಗದೇಶ್‌ಪುರ್‌ನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಇಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪಘಾತದ ನಂತರ ಬಸ್ಸಿನ ಚಾಲಕ ತನ್ನ ವಾಹನದೊಂದಿಗೆ ಪರಾರಿಯಾಗಿದ್ದಾನೆ. ಆತನ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇದರ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.