ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ದೆಹಲಿಯಲ್ಲಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ (89) ಅವರು ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ಬೆಳಿಗ್ಗೆ 10.44ಕ್ಕೆ ನಿಧನರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಅವರ ತಂದೆ ಬೆಳಗ್ಗೆ 10.44ಕ್ಕೆ ನಿಧನರಾಗಿದ್ದಾರೆ ಎಂದು ಟ್ವೀಟ್ ಮಾಡಿರುವ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವನೀಶ್ ಕೆ ಅವಾಸ್ಥಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಮಾಜಿ ಅರಣ್ಯ ರೇಂಜರ್ ಆಗಿದ್ದ ಯೋಗಿ ಬಿಶ್ತ್ ಅವರು, ಮಾರ್ಚ್ 13ರಿಂದ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿತ್ತು. ಅವರನ್ನು ಕಳೆದ ಹಲವು ದಿನಗಳಿಂದಲೂ ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.
ಸಿಎಂ ಆದಿತ್ಯನಾಥ್ ಅವರು ಕೋವಿಡ್ -19 ಸಭೆಯ ಅಧ್ಯಕ್ಷತೆ ವಹಿಸಿದ್ದಾಗ ಅಧಿಕಾರಿಯೊಬ್ಬರು ಅವರ ತಂದೆಯ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.