ADVERTISEMENT

ಅಯೋಧ್ಯೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ದೇಗುಲ ನಿರ್ಮಾಣ, ಪೂಜೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಸೆಪ್ಟೆಂಬರ್ 2022, 10:50 IST
Last Updated 19 ಸೆಪ್ಟೆಂಬರ್ 2022, 10:50 IST
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್   

ಅಯೋಧ್ಯೆ: ರಾಮ ಮಂದಿರ ನಿರ್ಮಾಣ ಹಂತದಲ್ಲಿರುವ ನಡುವೆಯೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಯೋಧ್ಯೆಯಲ್ಲಿ ದೇಗುಲ ನಿರ್ಮಾಣ ಮಾಡಲಾಗಿದೆ.

ಯೋಗಿ ಆದಿತ್ಯನಾಥ್ ಅವರ ಪ್ರತಿಮೆಗೆ ವ್ಯಕ್ತಿಯೊಬ್ಬರು ಪೂಜೆ ಮಾಡುತ್ತಿರುವ ಚಿತ್ರವನ್ನು ‘ಎಎನ್‌ಐ’ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ. ಈ ದೇಗುಲ ಅಯೋಧ್ಯೆಯ ‘ಮೌರ್ಯ ಕಾ ಪುರ್ವಾ’ ಗ್ರಾಮದಲ್ಲಿದೆ ಎಂದು ಉಲ್ಲೇಖಿಸಿದೆ.

ಈ ಮಧ್ಯೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಮುಂದುವರಿದಿದೆ. ಮೂಲಗಳ ಪ್ರಕಾರ, 2023ರ ಡಿಸೆಂಬರ್ ವೇಳೆಗೆ ‘ರಾಮ ಲಲ್ಲಾ’ ದರ್ಶನ ಆರಂಭವಾಗುವ ನಿರೀಕ್ಷೆ ಇದೆ.

ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾಮಗಾರಿ ಶೇಕಡ 40ಕ್ಕೂ ಹೆಚ್ಚು ಭಾಗ ಪೂರ್ಣಗೊಂಡಿದೆ. 2023ರ ಡಿಸೆಂಬರ್‌ನಿಂದ ಭಕ್ತರು ದೇವರಿಗೆ ಪೂಜೆ ಅರ್ಪಿಸಲು ಅವಕಾಶ ನೀಡಲು ಸಾಧ್ಯವಾಗುವ ನಿರೀಕ್ಷೆ ಇದೆ ಎಂದು ಶ್ರೀ ರಾಮಜನ್ಮಭೂಮಿ ಟ್ರಸ್ಟ್‌ನ ಅಧಿಕಾರಿಗಳು ಇತ್ತೀಚೆಗೆ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.