ADVERTISEMENT

ಉ.ಪ್ರ | ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ: 2.89 ಕೋಟಿ ಮತದಾರರಿಗೆ ಕೊಕ್‌

ಪಿಟಿಐ
Published 28 ಡಿಸೆಂಬರ್ 2025, 16:27 IST
Last Updated 28 ಡಿಸೆಂಬರ್ 2025, 16:27 IST
ಚುನಾವಣಾ ಆಯೋಗ
ಚುನಾವಣಾ ಆಯೋಗ   

ಲಖನೌ: ಉತ್ತರಪ್ರದೇಶದಲ್ಲಿ ಡಿಸೆಂಬರ್‌ 31ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಈ ಪಟ್ಟಿಯಲ್ಲಿ 12.55 ಕೋಟಿ ಮತದಾರರ ಹೆಸರು ಪ್ರಕಟಗೊಳ್ಳಲಿದೆ ಎಂದು ಹೇಳಲಾಗಿದೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ (ಎಸ್‌ಐಆರ್‌) ಪೂರ್ವ ಮತದಾರರ ಪಟ್ಟಿಯಿಂದ ಸರಿಸುಮಾರು 2.89 ಕೋಟಿ ಹೆಸರುಗಳನ್ನು ತೆಗೆದು ಹಾಕಲಾಗಿದೆ.

‘ಪಟ್ಟಿಯಿಂದ ತೆಗೆದು ಹಾಕಿದವರ ಹೆಸರುಗಳನ್ನು ಸೂಕ್ತ ದಾಖಲೆಗಳೊಂದಿಗೆ ಜನವರಿ 1ರಿಂದ ಮತ್ತೆ ಸೇರ್ಪಡೆಗೊಳಿಸಲು ಅವಕಾಶವಿದೆ’ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಭಾನುವಾರ ತಿಳಿಸಿದ್ದಾರೆ.

ADVERTISEMENT

‘ಲಖನೌ, ಗಾಜಿಯಾಬಾದ್‌, ಪ್ರಯಾಗ್‌ರಾಜ್‌ ಹಾಗೂ ಕಾನ್ಪುರದಲ್ಲಿ ಹೆಚ್ಚಿನ ಹೆಸರುಗಳನ್ನು ತೆಗೆದು ಹಾಕಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.