ADVERTISEMENT

ಉತ್ತರ ಪ್ರದೇಶ: ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಉಪೇಂದ್ರ ತಿವಾರಿ, ವಿಡಿಯೊ ವೈರಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಫೆಬ್ರುವರಿ 2022, 10:16 IST
Last Updated 5 ಫೆಬ್ರುವರಿ 2022, 10:16 IST
ಉಪೇಂದ್ರ ತಿವಾರಿ (ಎಎನ್‌ಐ ಟ್ವಿಟರ್‌ ಚಿತ್ರ)
ಉಪೇಂದ್ರ ತಿವಾರಿ (ಎಎನ್‌ಐ ಟ್ವಿಟರ್‌ ಚಿತ್ರ)   

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಕ್ರೀಡಾ ಸಚಿವ ಉಪೇಂದ್ರ ತಿವಾರಿ ಅವರು ಚುನಾವಣಾಧಿಕಾರಿಗಳ ಕಚೇರಿಗೆ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ್ದಾರೆ.

ಉಪೇಂದ್ರ ತಿವಾರಿ ಅವರು ಬಲ್ಲಿಯಾ ಜಿಲ್ಲೆಯ ಫೆಫ್ನಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಸಲು ಶನಿವಾರ ಅವರು ಆತುರದಿಂದ ಚುನಾವಣಾಧಿಕಾರಿ ಕಚೇರಿಯತ್ತ ಧಾವಿಸಿದ್ದಾರೆ. ಇದೀಗ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೇಸರಿ ಶಾಲು ಹಾಗೂ ಹಾರವನ್ನು ಧರಿಸಿರುವ ತಿವಾರಿ, ಜಿಲ್ಲಾಧಿಕಾರಿಗಳ ಕಚೇರಿಯ ಮುಖ್ಯ ಗೇಟ್‍ನಿಂದ ನಾಮನಿರ್ದೇಶನದ ಸಭಾಂಗಣದವರೆಗೆ ಓಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

ADVERTISEMENT

ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್‌ 7ರವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್‌ 10ರಂದು ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.