ADVERTISEMENT

Uttar Pradesh Election: ಮುಲಾಯಂ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜನವರಿ 2022, 5:58 IST
Last Updated 19 ಜನವರಿ 2022, 5:58 IST
ಮುಲಾಯಂ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆ (ಬಿಜೆಪಿ ಟ್ವಿಟರ್ ಖಾತೆಯ ವಿಡಿಯೊದಿಂದ ಸ್ಕ್ರೀನ್‌ಗ್ರ್ಯಾಬ್ ಮಾಡಿದ ಚಿತ್ರ)
ಮುಲಾಯಂ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆ (ಬಿಜೆಪಿ ಟ್ವಿಟರ್ ಖಾತೆಯ ವಿಡಿಯೊದಿಂದ ಸ್ಕ್ರೀನ್‌ಗ್ರ್ಯಾಬ್ ಮಾಡಿದ ಚಿತ್ರ)   

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಬುಧವಾರ ಬಿಜೆಪಿ ಸೇರಿದ್ದಾರೆ. ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.

ಬಿಜೆಪಿಯ ಪ್ರಮುಖ ನಾಯಕರ ಸಮ್ಮುಖದಲ್ಲಿ ನವದೆಹಲಿಯಲ್ಲಿ ಅಪರ್ಣಾ ಯಾದವ್ ಪಕ್ಷಕ್ಕೆ ಸೇರಿದರು.

ಅಪರ್ಣಾ ಯಾದವ್ ಅವರು ಮುಲಾಯಂ ಸಿಂಗ್ ಯಾದವ್‌ ಅವರ ಮಗ ಪ್ರತೀಕ್ ಯಾದವ್ ಪತ್ನಿ. ಪ್ರತೀಕ್ 2017ರ ಚುನಾವಣೆಯಲ್ಲಿ ಲಖನೌ ಕಂಟೋನ್ಮೆಂಟ್ ಕ್ಷೇತ್ರದಿಂದ ಬಿಜೆಪಿಯ ರಿಟಾ ಬಹುಗುಣ ಜೋಶಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.