ADVERTISEMENT

ಉತ್ತರ ಪ್ರದೇಶ: ಮಾಜಿ ಸಿಎಂ ಕಲ್ಯಾಣ್ ಸಿಂಗ್ ಸ್ಥಿತಿ ಗಂಭೀರ

ಪಿಟಿಐ
Published 23 ಜುಲೈ 2021, 10:46 IST
Last Updated 23 ಜುಲೈ 2021, 10:46 IST
ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಎಸ್‌ಜಿಪಿಜಿಐಎಂಎಸ್ ಆಸ್ಪತ್ರೆಗೆ ಭೇಟಿ ನೀಡಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ವಿಚಾರಿಸಿದರು – ಚಿತ್ರ ಕೃಪೆ: ರಾಜನಾಥ್ ಸಿಂಗ್ ಟ್ವಿಟರ್ ಖಾತೆ
ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಎಸ್‌ಜಿಪಿಜಿಐಎಂಎಸ್ ಆಸ್ಪತ್ರೆಗೆ ಭೇಟಿ ನೀಡಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ವಿಚಾರಿಸಿದರು – ಚಿತ್ರ ಕೃಪೆ: ರಾಜನಾಥ್ ಸಿಂಗ್ ಟ್ವಿಟರ್ ಖಾತೆ   

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಸಂಜಯ್‌ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆ (ಎಸ್‌ಜಿಪಿಜಿಐಎಂಎಸ್‌) ಆಸ್ಪತ್ರೆ ಶುಕ್ರವಾರ ತಿಳಿಸಿದೆ.

ಸಿಸಿಎಂ, ಹೃದ್ರೋಗ, ನರರೋಗ, ನೆಪ್ರೊಲಜಿ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ಕಲ್ಯಾಣ್‌ ಸಿಂಗ್‌ ಅವರ ಆರೋಗ್ಯದ ಮೇಲೆ ಸೂಕ್ಷ್ಮವಾಗಿ ನಿಗಾವಹಿಸುತ್ತಿದ್ದಾರೆ. ಸಂಸ್ಥೆಯ ನಿರ್ದೇಶಕರಾದ ಪ್ರೊ. ಆರ್‌.ಕೆ.ಧಿಮನ್‌ ಅವರು ಚಿಕಿತ್ಸೆಯ ಮೇಲೆ ನಿಗಾ ಇರಿಸಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

89 ವರ್ಷ ವಯಸ್ಸಿನ ಕಲ್ಯಾಣ್ ಸಿಂಗ್ ಅವರು ಜುಲೈ 4 ರಂದು ಎಸ್‌ಜಿಪಿಜಿಐಎಂಎಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಇದಕ್ಕೂ ಮುನ್ನ ಅವರು ರಾಮ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.