ADVERTISEMENT

ಉತ್ತರಪ್ರದೇಶ | ಮತ್ತೊಂದು ಗ್ಯಾಂಗ್‌ರೇಪ್ ಪ್ರಕರಣ: ಯುವತಿ ಮೇಲೆ ಐವರಿಂದ ಅತ್ಯಾಚಾರ

ಪಿಟಿಐ
Published 16 ಏಪ್ರಿಲ್ 2025, 13:24 IST
Last Updated 16 ಏಪ್ರಿಲ್ 2025, 13:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹಮೀರಪುರ: ವಾರಾಣಸಿಯಲ್ಲಿ 19 ವರ್ಷದ ಯುವತಿ ಮೇಲೆ 23 ಜನರು ಸತತ ಐದು ದಿನಗಳ ಕಾಲ ಅತ್ಯಾಚಾರ ನಡೆಸಿದ ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ, ಹಮೀರ್‌ಪುರದಲ್ಲೂ ಅಂಥದ್ದೇ ಒಂದು ಘಟನೆ ನಡೆದಿದೆ. 

ಮಂಗಳವಾರ ರಾತ್ರಿ ಬಹಿರ್ದೆಸೆಗೆ ತೆರಳಿದ್ದ 21 ವರ್ಷದ ಯುವತಿ ಮೇಲೆ ಐವರು ಅತ್ಯಾಚಾರ ನಡೆಸಿದ್ದಾರೆ. ಈ ಕುರಿತು ಎಫ್‌ಐಆರ್ ದಾಖಲಾಗಿದೆ. ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ವಾರಾಣಸಿಯಲ್ಲಿ ನಡೆದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಆರೋಪಿಗಳನ್ನು ಬಂಧಿಸುವಂತೆ ಮತ್ತು ಘಟನೆ ಮರುಕಳಿಸದಂತೆ ಎಚ್ಚರ ವಹಿಸುವಂತೆ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಇತ್ತೀಚೆಗೆ ಸೂಚಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.