ADVERTISEMENT

ಹತ್ರಾಸ್‌ ಅತ್ಯಾಚಾರ ಪ್ರಕರಣ: ತ್ವರಿತಗತಿ ನ್ಯಾಯ ಬೇಕೆಂದ ನಟಿ ಕಂಗನಾ ರನೌತ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಸೆಪ್ಟೆಂಬರ್ 2020, 10:53 IST
Last Updated 30 ಸೆಪ್ಟೆಂಬರ್ 2020, 10:53 IST
ನಟಿ ಕಂಗನಾ ರನೌತ್‌
ನಟಿ ಕಂಗನಾ ರನೌತ್‌   

ಮುಂಬೈ: ಕಳೆದ ವರ್ಷ ಹೈದರಾಬಾದ್ ಅತ್ಯಾಚಾರ ಪ್ರಕರಣದಂತೆ ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಘಟನೆಗೆ ತ್ವರಿತಗತಿನ್ಯಾಯ ಒದಗಿಸಬೇಕೆಂದು ನಟಿ ಕಂಗನಾ ರನೌತ್ ಬುಧವಾರ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 'ನನಗೆ ಯೋಗಿ ಆದಿತ್ಯನಾಥ್‌ ಅವರ ಮೇಲೆ ಅಪಾರ ನಂಬಿಕೆ ಇದೆ. ಕಳೆದ ವರ್ಷ ಹೈದರಾಬಾದ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಜೀವಂತವಾಗಿ ಸುಟ್ಟಿಹಾಕಿದ್ದರು. ಆ ಘಟನೆ ನಡೆದ ಸ್ಥಳದಲ್ಲಿಯೇ ಆರೋಪಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಅಂತಹುದೇ ಭಾವನಾತ್ಮಕವಾದ ತ್ವರಿತಗತಿನ್ಯಾಯವನ್ನು ಬಯಸುತ್ತೇವೆ' ಎಂದು ಕಂಗನಾ ರನೌತ್‌ ತಿಳಿಸಿದ್ದಾರೆ.

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು. ಮೂಳೆ ಮುರಿತ ಮತ್ತು ನಾಲಿಗೆಯು ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು.

ADVERTISEMENT

ಘಟನೆ ಕುರಿತಂತೆ ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಹಾಯ ಮಾಡಲಿಲ್ಲ. ಆದರೆ, ಸಾರ್ವಜನಿಕರ ಆಕ್ರೋಶದ ನಂತರ ಪ್ರತಿಕ್ರಿಯಿಸಿದರು ಎಂದು ಮಹಿಳೆಯ ಕುಟುಂಬ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.