ADVERTISEMENT

ಹತ್ರಾಸ್‌ ಅತ್ಯಾಚಾರ: ಯುಪಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ ನೋಟಿಸ್‌

ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಲು ಸರ್ಕಾರಕ್ಕೆ ತಾಕೀತು ಮಾಡಿದ ಮಾನವ ಹಕ್ಕುಗಳ ಆಯೋಗ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 14:15 IST
Last Updated 30 ಸೆಪ್ಟೆಂಬರ್ 2020, 14:15 IST
ಪೊಲೀಸರ ವಾಹನವನ್ನು ತಡೆಯುತ್ತಿರುವ ಯುವತಿಯ ಪೋಷಕರು ಮತ್ತು ಸಂಬಂಧಿಕರು
ಪೊಲೀಸರ ವಾಹನವನ್ನು ತಡೆಯುತ್ತಿರುವ ಯುವತಿಯ ಪೋಷಕರು ಮತ್ತು ಸಂಬಂಧಿಕರು   

ನವದೆಹಲಿ: ಹತ್ರಾಸ್‌ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್ ನೀಡಿದೆ.

ಎರಡು ಕುಟುಂಬಗಳ ನಡುವಿನ ವೈಷಮ್ಯದ ಹಿನ್ನೆಲೆಯಲ್ಲಿ ಈ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಆದ್ದರಿಂದ ಅತ್ಯಾಚಾರಕ್ಕೆ ಒಳಗಾಗಿ ಸಾವಿಗೀಡಾದ ಯುವತಿಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಉತ್ತರ ಪ್ರದೇಶ ಸರ್ಕಾರಕ್ಕೆ ಮಾನವ ಹಕ್ಕುಗಳ ಆಯೋಗ ತಾಕೀತು ಮಾಡಿದೆ.

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು. ಮೂಳೆ ಮುರಿತ ಮತ್ತು ನಾಲಿಗೆಯು ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು.

ADVERTISEMENT

ಘಟನೆ ಕುರಿತಂತೆ ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಹಾಯ ಮಾಡಲಿಲ್ಲ. ಆದರೆ, ಸಾರ್ವಜನಿಕರ ಆಕ್ರೋಶದ ನಂತರ ಪ್ರತಿಕ್ರಿಯಿಸಿದರು ಎಂದು ಮಹಿಳೆಯ ಕುಟುಂಬ ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.