ADVERTISEMENT

ಸೋಮವಾರದಿಂದ ಜಿಮ್, ಮಲ್ಟಿಪ್ಲೆಕ್ಸ್‌ ತೆರೆಯಲು ಉತ್ತರ ಪ್ರದೇಶ ಸರ್ಕಾರ ಅನುಮತಿ

ಪಿಟಿಐ
Published 2 ಜುಲೈ 2021, 15:39 IST
Last Updated 2 ಜುಲೈ 2021, 15:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಲಖನೌ: ಕೊರೊನಾ ವೈರಸ್ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಿರುವ ಉತ್ತರ ಪ್ರದೇಶ ಸರ್ಕಾರವು ಸೋಮವಾರದಿಂದ ಶೇ 50 ರಷ್ಟು ಸಾಮರ್ಥ್ಯದೊಂದಿಗೆ ವ್ಯಾಯಾಮ ಶಾಲೆಗಳು, ಸಿನೆಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು ಮತ್ತು ಕ್ರೀಡಾಂಗಣಗಳನ್ನು ತೆರೆಯಲು ಅನುಮತಿ ನೀಡಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಕೋವಿಡ್ ಪರಿಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಈ ಸಡಿಲಿಕೆಯನ್ನು ಘೋಷಿಸಿದ್ದಾರೆ ಎಂದು ರಾಜ್ಯ ಸರ್ಕಾರದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

ನೂತನ ಮಾರ್ಗಸೂಚಿಗಳು ಜುಲೈ 5ರ ಬೆಳಗ್ಗೆ 7ಗಂಟೆಯಿಂದ ಜಾರಿಗೆ ಬರಲಿದ್ದು, ಎಲ್ಲ ವ್ಯಾಯಾಮ ಶಾಲೆಗಳು, ಸಿನಿಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು ಮತ್ತು ಕ್ರೀಡಾಂಗಣಗಳನ್ನು ವಾರದಲ್ಲಿ ಐದು ದಿನ ಬೆಳಗ್ಗೆ 7 ರಿಂದ ರಾತ್ರಿ 9ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಇವುಗಳನ್ನು ಶೇ 50ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದ್ದು, ಇದೇ ವೇಳೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಕೋವಿಡ್ ಪರಿಶೀಲನಾ ಸಭೆಯಲ್ಲಿ ಸಿಎಂ ಹೇಳಿದರು ಎಂದು ವಕ್ತಾರರು ತಿಳಿಸಿದ್ದಾರೆ.

ADVERTISEMENT

ಕಂಟೈನ್‌ಮೆಂಟ್ ವಲಯಗಳಲ್ಲಿನ ಜಿಮ್‌ಗಳು ತೆರೆಯಲು ಅವಕಾಶ ನೀಡಿಲ್ಲ.

ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ತಡೆಗಟ್ಟುವ ಕ್ರಮಗಳ ಬಗ್ಗೆ ಪೋಸ್ಟರ್ ಅಥವಾ ಬ್ಯಾನರ್‌ಗಳನ್ನು ಅಳವಡಿಸಲು ಮುಖ್ಯಮಂತ್ರಿ ನಿರ್ದೇಶನ ನೀಡಿರುವುದಾಗಿ ವಕ್ತಾರರು ತಿಳಿಸಿದ್ದಾರೆ.

ಜೀವ ಮತ್ತು ಜೀವನೋಪಾಯ ಎರಡನ್ನೂ ಉಳಿಸುವ ಉದ್ದೇಶದಿಂದಾಗಿ ರಾಜ್ಯದಲ್ಲಿ ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲು ಸರ್ಕಾರ ಗಮನ ಹರಿಸಿದೆ. ಸಾಂಕ್ರಾಮಿಕ ರೋಗದ ಮೂರನೇ ಅಲೆಯನ್ನು ಎದುರಿಸಲು ಸಿದ್ಧವಾಗಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಅಲ್ಲದೆ ಕೊರೊನಾ ವೈರಸ್ ನಿಯಮಗಳನ್ನು ಪಾಲಿಸಲು ಸಾರ್ವಜನಿಕ ಸ್ಥಳಗಳಿಗೆ ಹತ್ತಿರದಲ್ಲೇ ಸಹಾಯವಾಣಿಗಳನ್ನು ತೆರೆಯಲು ಸಿಎಂ ಸೂಚನೆ ನೀಡಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.